ಇಂದು ಪೊಲೀಸ್ ಇಲಾಖೆ ನೂತನ ಕಟ್ಟಡಗಳ ಉದ್ಘಾಟನೆ

CTD 11 SP--10
Published on

ಚಿತ್ರದುರ್ಗ: ಪೊಲೀಸ್ ಇಲಾಖೆ ಬಸವೇಶ್ವರ ನಗರದಲ್ಲಿ ನಿರ್ಮಿಸಿರುವ ಪೊಲೀಸ್ ವಸತಿ ಸಮುಚ್ಚಯ, ಚಿತ್ರದುರ್ಗ ಗ್ರಾಮಾಂತರ ಹಾಗೂ ತಳಕು ಠಾಣೆಗಳ ನೂತನ ಕಟ್ಟಡಗಳ ಉದ್ಘಾಟನಾ ಸಮಾರಂಭವನ್ನು ನ.17ರಂದು ಮಧ್ಯಾಹ್ನ 12 ಗಂಟೆಗೆ ಬಸವೇಶ್ವರ ನಗರದಲ್ಲಿ ಏರ್ಪಡಿಸಲಾಗಿದೆ.
ಗೃಹ ಮಂತ್ರಿ ಡಾ.ಜಿ.ಪರಮೇಶ್ವರ ನೂತನ ಕಟ್ಟಡಗಳನ್ನು ಉದ್ಘಾಟಿಸುವರು. ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಜಿಲ್ಲಾ ಉಸ್ತು ವಾರಿ ಸಚಿವ ಡಿ.ಸುಧಾಕರ್ ಘನ ಉಪಸ್ಥಿತಿ ವಹಿಸುವವರು. ಶಾಸಕ ಕೆ.ಸಿ ವೀರೇಂದ್ರಪಪ್ಪಿ ಅಧ್ಯಕ್ಷತೆ ವಹಿಸುವವರು. ರಾಜ್ಯವಕ್ಫ್ ಮಂಡಳಿ ಅಧ್ಯಕ್ಷ ಕೆ.ಅನ್ವರ್‌ಭಾಷಾ, ಶಾಸಕರು, ವಿಧಾನ ಪರಿಷತ್ ಸದಸ್ಯರು ಮುಖ್ಯಅತಿಥಿಗಳಾಗಿ ಆಗಮಿಸಲಿದ್ದಾರೆ. ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಎಸ್‌ಪಿ ಧರ್ಮೇಂದರ್‌ಕುಮಾರ್ ಮೀನಾ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net