ಇಂದು ವಿದ್ಯುತ್ ಜನಸಂಪರ್ಕ ಸಭೆ

New Power Cut
Published on

ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ಚಾಮರಾಜನಗರ ಕಾರ್ಯ ಮತ್ತು ಪಾಲನಾ ಉಪವಿಭಾಗದ ವತಿಯಿಂದ ಗುಂಡ್ಲುಪೇಟೆ ಮತ್ತು ಬೇಗೂರು ಉಪವಿಭಾಗಗಳ ವ್ಯಾಪ್ತಿಯಲ್ಲಿ ಡಿ.18ರಂದು ಜನಸಂಪರ್ಕ ಸಭೆಯನ್ನು ಹಮ್ಮಿಕೊಂಡಿದೆ.

ಬೇಗೂರು ಉಪವಿಭಾಗ ವ್ಯಾಪ್ತಿಯಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 12 ಗಂ ಟೆಯವರೆಗೆ ಹಾಗೂ ಗುಂಡ್ಲುಪೇಟೆ ಉಪವಿಭಾಗದಲ್ಲಿ ಮಧ್ಯಾಹ್ನ 12.30 ರಿಂದ 1.30 ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಸಭೆಗೆ ವಿದ್ಯುತ್ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿದ್ಯುತ್ ಸಂಬಂಧಿತ ಕುಂದು ಕೊರತೆಗಳಿದ್ದಲ್ಲಿ ತಿಳಿಸುವಂತೆ ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net