ಡಿ.11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

New Power Cut
Published on

ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಸಂತೇಮರಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಡಿ.11 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ತಾಲೂಕಿನ ಉಮ್ಮತ್ತೂರು, ಬಾಗಳಿ, ಲಿಂಗಣಾಪುರ, ಜನ್ನೂರು, ಜನ್ನೂರು ಹೊಸೂರು, ಹಳ್ಳಿಕೆರೆಹುಂಡಿ, ಗಣಗನೂರು, ಗಣಗನೂರುಪುರ, ನವಿಲೂರು, ಆಲ್ದೂರು, ಬಿಎಂಕೆ ಹುಂಡಿ, ಗೊದ್ದಲಹುಂಡಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ನಿಗಮದ ಜೊತೆ ಸಹಕರಿಸಬೇಕು. ವಿದ್ಯುತ್ ಸಂಬಂಧಿತ ದೂರು ಮತ್ತು ಸಹಾಯಕ್ಕಾಗಿ ಉಚಿತ ದೂ.ಸಂ 1912 ಸಂಪರ್ಕಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net