ಹಲಗೂರು: ಡಿ.ಆರ್. ಗುರು ಶಿಷ್ಯರ ಬಳಗ, ಅನಿಕೇತನ ಲಯನ್ಸ್ ಸಂಸ್ಥೆ, ಮಂಡ್ಯ ಸರ್ಕಾರಿ ರಕ್ತನಿಧಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ನ.23ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3.30 ಗಂಟೆವರೆಗೆ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿನ ಸಭಾ ಭವನದಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ.
18 ವರ್ಷದಿಂದ 60 ವರ್ಷದೊಳಗಿನ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದು. ದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ರಕ್ತ ನೀಡುವ ಮೂಲಕ ಅಮೂಲ್ಯ ಜೀವ ಉಳಿಸಬೇಕೆಂದು ಡಿಆರ್ ಗುರು ಶಿಷ್ಯರ ಬಳಗದ ಅಧ್ಯಕ್ಷ ಡಿ.ಆರ್.ದೇವರಾಜ್ ಮನವಿ ಮಾಡಿದ್ದಾರೆ.