ಇಂಧನ, ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

11 ckm 1
ಚಿಕ್ಕಮಗಳೂರಿನಲ್ಲಿ ಕಾರಿಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರ ಇಂಧನ ದರ ಏರಿಕೆ ಮಾಡಿರುವುದರ ವಿರುದ್ಧ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
Published on

ಚಿಕ್ಕಮಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಬೆಲೆ ಹೆಚ್ಚಳಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ನಗರದ ಹನುಮಂತಪ್ಪ ವೃತ್ತದಿಂದ ಕೇಂದ್ರಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ, ಗ್ಯಾಸ್ ಸಿಲಿಂಡರ್, ಸೌದೆ ಮತ್ತು ಕಾರಿಗೆ ಹಗ್ಗ ಕಟ್ಟಿ ಎಳೆದುಕೊಂಡು ಮೆರವಣಿಗೆ ಹೊರಟ ಪ್ರತಿಭಟನಾಕಾರರು ಆಜಾದ್ ವೃತ್ತದಲ್ಲಿ ಸಮಾವೇಶಗೊಂಡು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಈಗಾಗಲೇ ಹೆಚ್ಚಳಗೊಳಿಸಿರುವ ಇಂಧನ ಹಾಗೂ ಗ್ಯಾಸ್ ಬೆಲೆಯನ್ನು ಕಡಿತಗೊಳಿಸಬೇಕೆಂದು ಆಗ್ರಹಿಸಿ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು.

ನಂತರ ಪ್ರತಿಭಟನಾ ನಿರತನ್ನುz್ದೆÃಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ. ಅಂಶುಮAತ್, ರಾಜ್ಯದಲ್ಲಿ ಬಿಜೆಪಿ ತನ್ನ ಜವಾಬ್ದಾರಿಯನ್ನು ಮರೆತಿದೆ. ರಚನಾತ್ಮಕ ವಿರೋಧಪಕ್ಷವಾಗಿ ಕಾರ್ಯನಿರ್ವಹಿಸುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದ ಅವರು, ಕೇಂದ್ರ ಸರ್ಕಾರ ಅದಾನಿ, ಅಂಬಾನಿ ರಕ್ಷಣೆಗೆ ಮುಂದಾಗಿದೆ. ಅವರ ಆಸ್ತಿ ರಕ್ಷಣೆ ಮಾಡುವ ಕಾರ್ಯದಲ್ಲಿ ನಿರತವಾಗಿದೆ ಎಂದು ಆರೋಪಿಸಿದರು.

ರೈತರು, ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿಗಳ ಬದುಕನ್ನು ಹಸನುಗೊಳಿಸಲು ಕೇಂದ್ರ ಸರ್ಕಾರ ಮುಂದಾಗುತ್ತಿಲ್ಲ, ಸಂವಿಧಾನ ವಿರೋಧಿ ನಿಲುವು ತಾಳುವ ಮೂಲಕ ಸಂವಿಧಾನ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಅವೈಜ್ಞಾನಿಕ ಆರ್ಥಿಕ ನೀತಿಯಿಂದ ರೈತರ ಆದಾಯ ದ್ವಿಗುಣಗೊಳ್ಳುತ್ತಿಲ್ಲ. ಅಂತಾರಾಷ್ಟಿçÃಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳಗೊಳಿಸಿದೆ ಎಂದು ದೂರಿದರು.

ಅಡುಗೆ ಅನಿಲ ಬೆಲೆ ೪೦೦ ರೂ.ಗಳಿಂದ ೧ ಸಾವಿರ ರೂ. ಗಡಿ ತಲುಪದೆ. ಯಾವ ನೈತಿಕತೆ ಆಧಾರದ ಮೇಲೆ ರಾಜ್ಯದಲ್ಲಿ ಬಿಜೆಪಿ ಮುಖಂಡರು ಬೆಲೆಏರಿಕೆ ವಿರೋಧಿಸಿ ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ ಅವರು, ರಾಜ್ಯದಲ್ಲಿ ಯಾತ್ರೆ ಕೈಗೊಳ್ಳುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸವನ್ನು ಬಿಜೆಪಿ ಮುಖಂಡರು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಡವರ ಸಮಸ್ಯೆಗಳಿಗೆ ಬಿಜೆಪಿ ಸ್ಪಂದಿಸುತ್ತಿಲ್ಲ, ಪಂಚ ಗ್ಯಾರಂಟಿಗಳನ್ನು ಸಹಿಸಿಕೊಳ್ಳಲಾಗದೆ ಬಿಟ್ಟಿಭಾಗ್ಯಗಳೆಂದು ಹಿಯಾಳಿಸುತ್ತಿದ್ದಾರೆ. ಕೇಂದ್ರ ಸರ್ಕಾರ, ಇಂಧನ, ಅಡುಗೆ ಅನಿಲ, ಅಡುಗೆ ಎಣ್ಣೆಯ ದರವನ್ನು ಹೆಚ್ಚಳಗೊಳಿಸಿದ್ದರೂ ಇದರ ಬಗ್ಗೆ ರಾಜ್ಯ ಬಿಜೆಪಿ ಮುಖಂಡರು ತುಟಿ ಬಿಚ್ಚುತ್ತಿಲ್ಲ ಎಂದು ಟೀಕಿಸಿದರು.

ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಪ್ರತಿ ಮನೆಗೆ ತಲುಪಿಸುವ ಕೆಲಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಬೇಕು. ಅಭಿವೃದ್ಧಿ ವಿಷಯದಲ್ಲಿ ಬಹಿರಂಗ ಚರ್ಚೆಗೆ ಬಿಜೆಪಿ ಮುಖಂಡರಿಗೆ ಪಂಥಾಹ್ವಾನ ನೀಡಿದರು.

ಕೆಪಿಸಿಸಿ ವಕ್ತಾರ ಎಚ್.ಎಚ್. ದೇವರಾಜ್ ಮಾತನಾಡಿ, ಹಲವಾರು ವರ್ಷ ಆಡಳಿತ ನಡೆಸಿರುವ ಕಾಂಗ್ರೆಸ್ ಪಕ್ಷಕ್ಕೆ ಆಡಳಿತ ಅನುಭವ ಇದೆ. ಡಾ. ಮನಮೋಹನ್‌ಸಿಂಗ್ ಪ್ರಧಾನಿಯಾಗಿದ್ದಾಗ ವಿವಿಧ ಸವಲತ್ತುಗಳನ್ನು ನೀಡಿರುವ ಬಗ್ಗೆ ಬಿಜೆಪಿ ಮುಖಂಡರು ಆತ್ಮಾವಲೋಕನ ಮಾಡಿಕೊಳ್ಳುವುದು ಒಳ್ಳೆಯದು ಎಂದರು.

ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಲು ಬಿಜೆಪಿ ಮುಖಂಡರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ ಅವರು, ಪಂಚಗ್ಯಾರAಟಿಗಳ ಸವಲತ್ತುಗಳನ್ನು ಬಿಜೆಪಿ ಮತ್ತು ಬಜರಂಗದಳ ಮುಖಂಡರ ಕುಟುಂಬಗಳು ಪಡೆಯುತ್ತಿಲ್ಲವೇ ಎಂದು ಪ್ರಶ್ನಿಸಿದರು.

ದೇಶಕ್ಕೆ ಮಾದರಿ ಆಡಳಿತ ನೀಡುತ್ತಿರುವ ರಾಜ್ಯ ಸರ್ಕಾರದ ಗ್ಯಾರಂಟಿಗಳನ್ನು ಬಿಜೆಪಿ ಮುಖಂಡರು ನಕಲು ಮಾಡುವ ಮೂಲಕ ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರ ಹಿಡಿದಿದ್ದಾರೆ ಎಂದರು.

ಎಐಸಿಸಿ ಕಾರ್ಯದರ್ಶಿ ಬಿ.ಎಂ. ಸಂದೀಪ್ ಮಾತನಾಡಿ, ಕೇಂದ್ರ ಸರ್ಕಾರವೇ ಅಡುಗೆ ಅನಿಲ ಮತ್ತು ಇಂಧನ ಬೆಲೆಗಳನ್ನು ಹೆಚ್ಚಿಸಿದೆ. ರಾಜ್ಯದಲ್ಲಿ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಜನಾಕ್ರೋಶಯಾತ್ರೆ ಹಮ್ಮಿಕೊಂಡಿರುವುದರಲ್ಲಿ ಅರ್ಥವಿಲ್ಲ. ಕೇಂದ್ರ ಸರ್ಕಾರ ನುಡಿದಂತೆ ನಡೆಯುತ್ತಿಲ್ಲ. ಹಾಗಾಗಿ ಲೋಕಸಭೆ ಚುನಾವಣೆಯಲ್ಲಿ ಬಹುಮತ ಬಾರದೆ ಪ್ರಾದೇಶಿಕ ಪಕ್ಷಗಳ ಬೆಂಬಲದಿAದ ದೇಶದಲ್ಲಿ ಆಡಳಿತ ನಡೆಸುತ್ತಿದೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಡಿ.ಎಲ್.ವಿಜಯಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಮುಖಂಡರಾದ ಹಿರೇಮಗಳೂರು ರಾಮಚಂದ್ರ, ಮಲ್ಲೇಶ್, ಜಯರಾಜ್‌ನಾಯ್ಡು, ರಮೇಶ್, ಮಹ್ಮದ್ ಅಕ್ಬರ್, ಮಲ್ಲೇಶ್, ಲೋಕೇಶ್, ಪ್ರವೀಣ್, ತನೋಜ್‌ಕುಮಾರ್ ನಾಯ್ಡು, ಲಕ್ಷö್ಮಣ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net