ಇಎಸ್‌ಐ ಆಸ್ಪತ್ರೆಗೆ ಸಂಸದ ಯದುವೀರ್ ಭೇಟಿ

mysore
Published on

ಮೈಸೂರು:ನಗರದ ಕೆ.ಆರ್.ಎಸ್. ರಸ್ತೆಯಲ್ಲಿರುವ ಇಎಸ್‌ಐ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸೂಚಿಸಿದರು.

ಸೋಮವಾರ ಇಎಸ್‌ಐ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ವೈದ್ಯರು ಮತ್ತು ಆಡಳಿತ ಮಂಡಳಿ ರೋಗಿಗಳೊಂದಿಗೆ ತಾಳ್ಮೆಯಿಂದ ವರ್ತಿಸಬೇಕು.

ರೋಗಿಗಳಿಗೆ ಸೂಕ್ತ, ಸಮರ್ಪಕ, ಪರಿಣಾಮಕಾರಿ ಚಿಕಿತ್ಸೆ ನೀಡುವುದನ್ನು ಖಚಿತಪಡಿಸಕೊಳ್ಳಬೇಕು. ಎಲ್ಲ ಸಮಯದಲ್ಲೂ ಸ್ವಚ್ಛತೆ ಮತ್ತು ನೈರ್ಮಲ್ಯವನ್ನು ಕಾಪಾಡಬೇಕು ಎಂದು ತಾಕೀತು ಮಾಡಿದರು.

ವೈದ್ಯಕೀಯ ಯಂತ್ರೋಪಕರಣಗಳು, ತಜ್ಞ ವೈದ್ಯರ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗುವುದು. ಖಾಲಿ ಇರುವ ವೈದ್ಯ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net