

ತರೀಕೆರೆ: ಸಿಎಂ ಸಿದ್ದರಾಮಯ್ಯ ಅವರ ಅನ್ನಭಾಗ್ಯದ ಪರಿಕಲ್ಪನೆ ಫೆಬ್ರವರಿಯಿಂದ ಮತ್ತೆ ಹೆಚ್ಚುವರಿ 5 ಕೆ.ಜಿ ಅಕ್ಕಿ ಕೊಡುತ್ತಿರುವುದರಿಂದ ಸಾಕಾರಗೊಂಡಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಗೋವಿಂದೇಗೌಡ ಹೇಳಿದರು.
ಲಿಂಗದಹಳ್ಳಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿದಾರರಿಗೆ ಅಕ್ಕಿ ವಿತರಿಸಿ ಮಾತನಾಡಿ, ಬಡವರ್ಗದವರ ಹಸಿವು ನೀಗಿಸುವ ಉದ್ದೇಶಕ್ಕೆ ಸರ್ಕಾರ ಹೆಚ್ಚುವರಿ ಅಕ್ಕಿ ವಿತರಿಸುವ ನಿರ್ಧಾರಕ್ಕೆ ಬಂದಿದೆ. ಮಾರ್ಚ್‌ನಲ್ಲಿ ಫೆಬ್ರವರಿಯ 5 ಕೆ.ಜಿ ಸೇರಿಸಿ ಒಟ್ಟು 15 ಕೆ.ಜಿ ಅಕ್ಕಿ ವಿತರಿಸಲಾಗುತ್ತಿದೆ. ಏಪ್ರಿಲ್‌ನಿಂದ ನಿರಂತರ 10 ಕೆ.ಜಿ ಅಕ್ಕಿ ನೀಡಲಾಗುವುದು ಎಂದು ತಿಳಿಸಿದರು. ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯ ಸಂತೋಷ್ ನಾಯ್ಕ, ನ್ಯಾಯಬೆಲೆ ಅಂಗಡಿ ಮಾಲೀಕ ಪ್ರಕಾಶ್ ಇತರರಿದ್ದರು.