ಇನ್ನು ಚಂದ್ರ ಹತ್ತಿರ

Mahaling Swamy
Published on

ಬೀದರ್: ಭಾರತದ ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳ ತಲುಪಿರುವುದರಿಂದ ಈಗ ಚಂದ್ರ ಇನ್ನಷ್ಟು ಹತ್ತಿರವಾಗಿದ್ದಾನೆ ಎಂದು ರಾಷ್ಟ್ರೀಯ ಬಸವ ದಳದ ಬೀದರ್ ದಕ್ಷಿಣ ಘಟಕದ ಉಸ್ತುವಾರಿ ಮಹಾಲಿಂಗ ಸ್ವಾಮಿ ಚಟ್ನಳ್ಳಿ ಹೇಳಿದ್ದಾರೆ.
ಇಡೀ ವಿಶ್ವದಲ್ಲೇ ಮೊದಲ ಬಾರಿಗೆ ಭಾರತ ಚಂದ್ರನ ದಕ್ಷಿಣ ಧ್ರುವವನ್ನು ಮುಟ್ಟಿದೆ. ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಇಳಿದಿದ್ದಕ್ಕೆ ಕೋಟ್ಯಂತರ ಭಾರತೀಯರಿಗೆ ಸಂತಸವಾಗಿದೆ ಎಂದು ತಿಳಿಸಿದ್ದಾರೆ.
ಚಂದ್ರಯಾನ 3 ಯೋಜನೆಯಿಂದ ಚಂದ್ರನ ಕುರಿತು ಇನ್ನಷ್ಟು ಸಂಗತಿಗಳನ್ನು ಅರಿಯಲು ಸಾಧ್ಯವಾಗಲಿದೆ. ವೈಜ್ಞಾನಿಕ ಮನೋಭಾವ ಬೆಳೆಯಲಿದೆ. ವಿದ್ಯಾರ್ಥಿಗಳಿಗೆ ವಿಜ್ಞಾನಿ ಆಗಿ ಹೊರ ಹೊಮ್ಮಲು ಪ್ರೇರಣೆಯೂ ಸಿಗಲಿದೆ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net