ಇನ್ನೂ ರಾಜೀನಾಮೆ ನೀಡಿಲ್ಲ-ಹೊರಟ್ಟಿ

horatti
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ನಾನು ಇನ್ನೂ ರಾಜೀನಾಮೆ ನೀಡಿಲ್ಲ ಎಂದು ಬಸವರಾಜ ಹೊರಟ್ಟಿ ಸ್ಪಷ್ಟಪಡಿಸಿದ್ದಾರೆ.

ಅವರು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ರಾಜೀನಾಮೆ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಈ ಕುರಿತು ಭಾನುವಾರ ಸಂಜೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಬೆಳಗ್ಗೆ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧಾರ ಕೈಗೊಂಡಿದ್ದೇನೆ ಎಂದು ಹೇಳಿದ್ದೆ ಅಷ್ಟೇ. ಆದರೆ ಇನ್ನೂ ರಾಜೀನಾಮೆ ನೀಡಿಲ್ಲ ಎಂದರು.

ಕೆಲ ದಿನಗಳ ಹಿಂದೆಯೇ ರಾಜೀನಾಮೆ ಪತ್ರ ತಯಾರಿಸಲಾಗಿತ್ತು. ಆ ಪತ್ರವನ್ನು ಯಾರೋ ಮೊಬೈಲ್​ನಲ್ಲಿ ಸೆರೆ ಹಿಡಿದು ವೈರಲ್ ಮಾಡಿದ್ದಾರೆ. ಪತ್ರಕ್ಕೆ ನಾನು ಸಹಿ ಮಾಡಿಲ್ಲ. ಸದನದಲ್ಲಿ ಇತ್ತೀಚೆಗೆ ನಡೆದ ಬೆಳವಣಿಗೆಯಿಂದ ತುಂಬಾ ನೋವಾಗಿದೆ. ಆದ್ದರಿಂದ ಸ್ನೇಹಿತರ ಹಾಗೂ ಹಿತೈಷಿಗಳ ಸಲಹೆ ಒಡೆದು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪುನರುಚ್ಚರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net