ಇನ್ನೊಂದು ವರ್ಷದಲ್ಲಿ ಗ್ರಾಮೀಣ ಠಾಣೆ ಆರಂಭ

web 33
Published on

ಕಡೂರು: ಗ್ರಾಮೀಣ ಭಾಗದಲ್ಲಿ ಪೊಲೀಸ್ ಠಾಣೆಗಳ ಆರಂಭಕ್ಕೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಂದಿನ ವರ್ಷ ಹೊಸ ಗ್ರಾಮಾಂತರ ಠಾಣೆಗಳನ್ನು ತೆರೆಯಲಾಗುವುದು ಎಂದು ಪಶ್ಚಿಮ ವಲಯದ ಪೊಲೀಸ್ ಮಹಾ ನಿರೀಕ್ಷಕ ದೇವಜ್ಯೋತಿ ರೇ ತಿಳಿಸಿದರು.

ಪೊಲೀಸ್ ಠಾಣೆಗೆ ಬುಧವಾರ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನದಿಂದ ದಿನಕ್ಕೆ ಎಲ್ಲೆಡೆ ಜನಸಂದಣಿ, ವಾಹನಗಳ ದಟ್ಟಣೆ ಹೆಚ್ಚಾಗುತ್ತಿರುವುದರಿಂದ ತುಂಬ ಅಗತ್ಯ ಇರುವ ಕಡೆಗಳಲ್ಲಿ ಟ್ರಾಫಿಕ್ ಪೊಲೀಸ್ ಠಾಣೆಗಳನ್ನು ಆರಂಭಿಸುವ ಚಿಂತನೆ ನಡೆಸಲಾಗಿದೆ. ಈ ಕುರಿತು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಕರೊನಾ ಕಾರಣದಿಂದ ಸರ್ಕಾರ ಈ ಸಾಲಿನ ಅನುದಾನ ಬಿಡುಗಡೆಯಾಗದ ಪರಿಣಾಮ ಟ್ರಾಫಿಕ್ ಠಾಣೆಗಳನ್ನು ಆರಂಭಿಸಲು ಸಾಧ್ಯವಿಲ್ಲ. ಅಗತ್ಯವಿದ್ದರೆ ಹೆಚ್ಚಿನ ಸಿಬ್ಬಂದಿ ಒದಗಿಸಬಹುದು. ಪೊಲೀಸ್ ವಸತಿಗೃಹಗಳ ಸುಧಾರಣೆ ಮತ್ತು ನಿರ್ವಣಕ್ಕೆ ಸರ್ಕಾರದ ಮಟ್ಟದಲ್ಲಿ ರ್ಚಚಿಸಲಾಗುವುದು ಎಂದರು.

ಡಿವೈಎಸ್​ಪಿ ರೇಣುಕಾಪ್ರಸಾದ್, ಶಿವಕುಮಾರ್, ಕಡೂರು ಪಿಎಸೈವಿಶ್ವನಾಥ್, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net