ಇಬ್ಬರಿಗೆ ಗೌರವ ಡಾಕ್ಟರೇಟ್, ರಾಷ್ಟ್ರಪತಿ ಗೈರು

1
Published on

ಮೈಸೂರು: ಬೆಂಗಳೂರಿನ ಧನ್ವಂತ್ರಿ ಎಜುಕೇಷನ್ ಟ್ರಸ್ಟ್‌ನ ಸಂಸ್ಥಾಪಕ ಎನ್.ರಾಮಚಂದ್ರಯ್ಯ, ಚಿಲ್ಡ್ರನ್ಸ್ ಎಜುಕೇಷನ್ ಸೊಸೈಟಿ ಅಧ್ಯಕ್ಷ ವೆಂಕಟ
ಲಕ್ಷ್ಮಿ ನರಸಿಂಹರಾಜು ಅವರಿಗೆ ಗೌರವ ಡಾಕ್ಟರೇಟ್(ಡಿ.ಲಿಟ್) ಪದವಿಯನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಪ್ರದಾನ ಮಾಡಿದರು. ಗೌರವ ಡಾಕ್ಟರೇಟ್‌ಗೆ ಆಯ್ಕೆಯಾಗಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಮಾರಂಭಕ್ಕೆ ಗೈರಾಗಿದ್ದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 18ನೇ ಘಟಿಕೋತ್ಸವ ಸಮಾರಂಭ ನಡೆಯಿತು.

ಗೌರವ ಡಾಕ್ಟರೇಟ್ ಪದವಿಯನ್ನು ರಾಷ್ಟ್ರಪತಿ ಪರಿಗಣನೆ ಮಾಡುವ ವಿಶ್ವಾಸವಿದ್ದು, ಅವರು ಒಪ್ಪಿದರೆ ರಾಜ್ಯಕ್ಕೆ ಆಗಮಿಸುವ ರಾಷ್ಟ್ರಪತಿಗೆ ಜು.3ರಂದು ರಾಜಭವನದಲ್ಲಿ ಈ ಪದವಿ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ತಿಳಿಸಿದರು.

ರಾಷ್ಟ್ರಪತಿ ಆಗಿದ್ದ ಸಂದರ್ಭದಲ್ಲೇ ಎ.ಪಿ.ಜೆ.ಅಬ್ದುಲ್ ಕಲಾಂ ಮತ್ತು ಪ್ರಣಬ್ ಮುಖರ್ಜಿ ಅವರು ವಿವಿಧ ವಿಶ್ವವಿದ್ಯಾಲಯಗಳು ನೀಡಿರುವ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸಿದ್ದಾರೆ. ಹೀಗಾಗಿ, ರಾಷ್ಟ್ರಪತಿ ಮುರ್ಮು ಅವರೂ ಮುಕ್ತ ವಿವಿಯ ಗೌರವ ಡಾಕ್ಟರೇಟ್ ಸ್ವೀಕಾರ ಮಾಡಲಿದ್ದಾರೆಂಬ ವಿಶ್ವಾಸವಿದೆ ಎಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net