ಬಳ್ಳಾರಿ : ನಗರದ ವಿವಿಧೆಡೆ ದಾಳಿ ನಡೆಸಿ ಇಬ್ಬರು ಬಾಲ ಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ ತಿಳಿಸಿದ್ದಾರೆ.
ಇಲ್ಲಿನ ಬೆಂಗಳೂರು ರಸ್ತೆ, ಬಂಡಿಹಟ್ಟಿ, ಎಪಿಎಂಸಿ ವೃತ್ತ ಮಂತಾದ ಸ್ಥಳಗಳಲ್ಲಿರುವ ಗ್ಯಾರೇಜ್, ಬೇಕರಿ, ಹೋಟೆಲ್, ಮೆಕ್ಯಾನಿಕ್ ಶಾಪ್, ಕಿರಾಣಿ ಅಂಗಡಿ, ಇಟ್ಟಂಗಿ ಭಟ್ಟಿ, ಗುಜರಿ ಶಾಪ್ ಸೇರಿದಂತೆ ವಿವಿಧ ಉದ್ದಿಮೆಗಳ ಮೇಲೆ ಆಕಸ್ಮಿಕ ದಾಳಿ ಮಾಡಿ ಇಬ್ಬರು ಬಾಲಕಾರ್ಮಿಕ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಿ ಸಂಬಂಧಿಸಿದ ಇಲಾಖೆಗೆ ಒಪ್ಪಿಸಲಾಗಿದೆ.