ಇಬ್ಬರು ಮಹಿಳಾ ಸಾಧಕರಿಗೆ ಸನ್ಮಾನ

15rajesh9
Published on

ಚಾಮರಾಜನಗರ: ಡಾ.ಎಸ್.ಪಿ.ಬಾಲಸುಬ್ರಮಣ್ಯಂ ಗಾನಗಂಧರ್ವ ವೇದಿಕೆ ಹಾಗೂ ಕರ್ನಾಟಕ ವಿಶ್ವಕರ್ಮ ಮಹಾಸಭಾ ಸಹಯೋಗದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಇಬ್ಬರು ಮಹಿಳಾ ಸಾಧಕರಿಗೆ ಇತ್ತೀಚೆಗೆ ಸನ್ಮಾನಿಸಲಾಯಿತು.

ನಗರದ ಸೆಸ್ಕ್ ಉಪ ವಿಭಾಗ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸೆಸ್ಕ್ ಉಪ ವಿಭಾಗದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಲೆಕ್ಕಾಧಿಕಾರಿ ಮಂಗಳಾಂಬ ಹಾಗೂ ಲೆಕ್ಕ ಸಹಾಯಕಿ ಶ್ವೇತ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಸ್.ಮಹೇಶ್ ಮಾತನಾಡಿ, ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಅಪ್ರತಿಮ ಸಾಧನೆ ಮಾಡುವ ಮೂಲಕ ದೇಶಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಸಾಮಾಜಿಕ, ರಾಜಕೀಯ, ಹಾಗೂ ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡುತ್ತಿದ್ದಾರೆ, ಅಲ್ಲದೆ ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಸಮಾಜದಲ್ಲಿ ಜನರಿಗೆ ಸರ್ಕಾರದಿಂದ ದೊರೆಯುವ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದ್ದಾರೆ. ಹೀಗಾಗಿ ಅವರ ಸಾಧನೆ ಅಪಾರವಾಗಿದ್ದು ಮಹಿಳೆಯರನ್ನು ಪ್ರತಿಯೊಬ್ಬರು ಗೌರವಿಸಬೇಕೆಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ವಿಭಾಗ ಕಚೇರಿಯ ಆಂತರಿಕ ಲೆಕ್ಕಪರಿಶೋಧನಾಧಿಕಾರಿ ಎನ್.ಮಹೇಶ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸುರೇಶ್, ಸಹಾಯಕ ಇಂಜಿನಿಯರ್ ಪಿ.ಸಿದ್ದರಾಜು, ಕಿರಿಯ ಇಂಜಿನಿಯರ್ ಎಸ್.ಸಿದ್ದರಾಜಪ್ಪ, ವಿಶ್ವಕರ್ಮ ಮಹಾಸಭಾ ಚಂದಕವಾಡಿ ಹೋಬಳಿ ಅಧ್ಯಕ್ಷ ಮಂಜುನಾಥ್ ವಿಶ್ವಕರ್ಮ, ಮುಖಂಡರಾದ ನಾಗೇಂದ್ರ, ಎಲ್ ಸುರೇಶ್, ಎಸ್.ಪಿ.ಬಿ ಸಂಘದ ಅಧ್ಯಕ್ಷ ಎಚ್.ಎಂ.ಶಿವಣ್ಣ ಮಂಗಲ ಹೊಸೂರು, ಕಾರ್ಯದರ್ಶಿ ಜೋಸೆಫ್ ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net