

ಅರಸೀಕೆರೆ ಗ್ರಾಮಾಂತರ: ತಾಲೂಕಿನ ಕುರುವಂಕ ಪ್ರಾಥಮಿಕ ಶಾಲಾ ಶಿಕ್ಷಕಿ ರೂಪಾ ಪರಮೇಶ್ ಮತ್ತು ಹೆಂಜಗೊಂಡನಹಳ್ಳಿ ಪ್ರಾಥಮಿಕ ಶಾಲಾ ಶಿಕ್ಷಕಿ ಹೇಮಲತಾ ಶಶಿಧರಮೂರ್ತಿ ಅವರಿಗೆ ಬೆಂಗಳೂರಿನ ವಿಶ್ವಮಾನವ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಕರುನಾಡ ಸಾಧಕರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕನ್ನಡ ನಾಡು ನುಡಿ ಸಾಹಿತ್ಯಾಸಕ್ತರಾದ ಡಾ.ಎಂ.ಪುಟ್ಟರಾಜು ಮತ್ತು ತಂಡದವರು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಇವರಿಬ್ಬರ ಸೇವೆಯನ್ನು ಗುರುತಿಸಿ ಗೌರವಿಸಿ ಪುರಸ್ಕರಿಸಿದ್ದಾರೆ. ತಾಲೂಕು ವಿವಿಧ ಶಿಕ್ಷಕ ಸಂಘಗಳ ಪದಾಧಿಕಾರಿಗಳು ಮತ್ತು ಕನ್ನಡ ಪರ ಸಂಘಟನೆಗಳು ಅಭಿನಂದಿಸಿದ್ದಾರೆ.