ಇಲಾಖೆಗಳ ನಡುವೆ ಸಮನ್ವಯತೆ ಇದ್ದಾಗ ಮಾತ್ರ ಅಭಿವೃದ್ಧಿ ಸಾಧ್ಯ: ಡಾ. ಪುನೀತ್

ಇಲಾಖೆಗಳ ನಡುವೆ ಸಮನ್ವಯತೆ ಇದ್ದಾಗ ಮಾತ್ರ ಅಭಿವೃದ್ಧಿ ಸಾಧ್ಯ: ಡಾ. ಪುನೀತ್
Published on


ಸಕಲೇಶಪುರ: ಇಲಾಖೆಗಳ ನಡುವೆ ಸಮನ್ವಯತೆ ಇದ್ದಾಗ ಮಾತ್ರ ಅಭಿವೃದ್ಧಿ ಸಾಧ್ಯ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯಧರ್ಶಿ ಡಾ. ಪುನೀತ್ ಹೇಳಿದರು.


ಬುದುವಾರ ತಾಪಂ ಸಬಾಂಗಣದಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಮಾತನಾಡಿ, ಜನಪ್ರತಿನಿಧಿಗಳ ಗೈರಿನಲ್ಲಿ ಅಧಿಕಾರಿಗಳೆ ಮುಖ್ಯರಸ್ಥರಾಗಿರುತ್ತಾರೆ. ಇಂತಹ ಸಮಯದಲ್ಲಿ ಅಭಿವೃದ್ಧಿ ಕುಂಠಿತಗೊಳ್ಳಬಾರದು. ಕುಡಿಯುವ ನೀರು ಇಲಾಖೆಯೊಂದಿಗೆ ವಿದ್ಯುತ್ ಇಲಾಖೆ ಸಹಕಾರ ಇದ್ದಾಗ ಮಾತ್ರ ಕಾಮಗಾರಿ ಪೂರ್ಣಗೊಳ್ಳಲು ಸಾಧ್ಯ ಅದೇ ರೀತಿ ಲೋಕೋಪಯೋಗಿ ಇಲಾಖೆಯೊಂದಿಗೆ ಅರಣ್ಯ ಇಲಾಖೆ ಸಹಕಾರ ನೀಡಿದಾಗ ಮಾತ್ರ ರಸ್ತೆ ಕಾಮಗಾರಿ ಪರಿಪೂರ್ಣಗೊಳ್ಳಲಿದೆ. ಆದ್ದರಿಂದೆ, ಇಲಾಖೆಯ ಆಹಂ ತೆಜಿಸಿ ಹೊಂದಾಣಿಕೆಯ ಮೂಲಕ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರೈಸಿ ಎಂದರು.

ಅನುದಾನದ ಕೊರತೆ ಮುಂದೆ ಮಾಡಿ ಅಭಿವೃದ್ಧಿ ಕಾಮಗಾರಿ ಸ್ಥಗಿತಪಡಿಸ ಬೇಡಿ, ಉದ್ಯೋಗ ಖಾತರಿ ಯೋಜನೆಯಡಿ ಅಭಿವೃದ್ಧಿಗೆ ಹಲವು ಅವಕಾಶಗಳಿದ್ದು ಇದರ ಪ್ರಯೋಜನ ಪಡೆಯುವ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಮುಂದಾಗಿ ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು. ಈ ವೇಳೆ ಹಲವು ಇಲಾಖೆಗಳಲ್ಲಿನ ಕುಂದುಕೊರತೆಗಳ ಬಗ್ಗೆ ವರಧಿ ಸಲ್ಲಿಸಲಾಯಿತು.


ಕಾರ್ಯಕ್ರಮದಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ಬೈರಪ್ಪ,ಸಹಾಯಕ ನಿರ್ದೇಶಕರಾದ ಅದಿತ್ಯಾ,ಹರೀಶ್ ನಾಮನಿರ್ದೇಶಿತ ಸದಸ್ಯರಾದ ಮಧು ಮುಂತಾದವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net