ಇವಿಎಂ ಪರಿಶೀಲನೆ ಆರಂಭ

51
Published on

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಹಂಚಿಕೆಯಾಗಿರುವ ಎಲೆಕ್ಟ್ರಾನಿಕ್ ಮತಯಂತ್ರಗಳ(ಇವಿಎಂ) ಪ್ರಥಮ ಹಂತದ ಪರಿಶೀಲನಾ ಕಾರ್ಯ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಶನಿವಾರದಿಂದ ಆರಂಭವಾಗಿದೆ.

ನಗರದ ನೂತನ ಜಿಲ್ಲಾ ಕಚೇರಿಗಳ ಸಂಕೀರ್ಣದ ಆವರಣದಲ್ಲಿ ನಿರ್ಮಿಸಿರುವ ವಿದ್ಯುನ್ಮಾನ ಮತಯಂತ್ರಗಳ ಭದ್ರತಾ ಕೊಠಡಿಯಲ್ಲಿ ಪ್ರಥಮ ಹಂತದ ಪರಿಶೀಲನಾ(ಎಫ್‌ಎಲ್‌ಸಿ)ಕಾರ್ಯವನ್ನು ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ವೀಕ್ಷಿಸಿದರು.

ಅಪರ ಜಿಲ್ಲಾಧಿಕಾರಿ ಕವಿತಾ ರಾಜರಾಮ್, ಚುನಾವಣಾ ತಹಸೀಲ್ದಾರ್ ರಾಮ್ ಪ್ರಸಾದ್ ಹಾಗೂ ಸಿಬ್ಬಂದಿ ಉಪಸ್ಧಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net