ಇಷ್ಟಲಿಂಗ ಪೂಜೆಯಲ್ಲಿ ತಲ್ಲೀನರಾದ ಭಕ್ತರು

26blk3
ಭಾಲ್ಕಿಯ ಚನ್ನಬಸವಾಶ್ರಮದಲ್ಲಿ ಬುಧವಾರ ಮಹಾಶಿವರಾತ್ರಿ ನಿಮಿತ್ತ ಸಾಮೂಹಿಕ ಇಷ್ಟಲಿಂಗ ಪೂಜೆಯಲ್ಲಿ ಭಕ್ತ ಸಮೂಹ.
Published on

ಭಾಲ್ಕಿ: ಮಹಾಶಿವರಾತ್ರಿ ನಿಮಿತ್ತ ಚನ್ನಬಸವಾಶ್ರಮ ಪರಿಸರದ ಕುಂಬಾರ ಗುಂಡಯ್ಯ ಕಲ್ಯಾಣ ಮಂಟಪದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ ನೆರವೇರಿತು.

ಹಿರೇಮಠ ಸಂಸ್ಥಾನದ ವತಿಯಿಂದ ಬುಧವಾರ ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ನ ಅಧ್ಯಕ್ಷರಾದ ನಾಡೋಜ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರ ಸಾನ್ನಿಧ್ಯದಲ್ಲಿ ನಡೆದ ಪೂಜೆಯಲ್ಲಿ ಸಾವಿರಾರು ಭಕ್ತರು ಶ್ರದ್ಧೆ, ಭಕ್ತಿಯಿಂದ ಇಷ್ಟಲಿಂಗ ಪೂಜೆ ಜಪ ಕೈಗೊಂಡರು.

ಪೂಜ್ಯರು ಸಾಮೂಹಿಕ ಇಷ್ಟಲಿಂಗ ಪೂಜೆಯ ಪ್ರಾತ್ಯಕ್ಷಿಕೆ ತೋರಿಸಿ ಕೊಟ್ಟರು. ಪೂಜೆಯ ಮಹತ್ವ ವಿವರಿಸುತ್ತಲೇ ವಿಧಿ ವಿಧಾನಗಳನ್ನು ಹೇಳಿಕೊಟ್ಟರು.

ಹಿರೇಮಠ ಸಂಸ್ಥಾನದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು, ಶ್ರೀ ಬಸವಲಿಂಗ ದೇವರು ಇತರರು ಪೂಜೆಯಲ್ಲಿ ಭಾಗಿಯಾಗಿದ್ದರು.

ಪ್ರತಿನಿತ್ಯ ಇಷ್ಟಲಿಂಗ ಪೂಜೆ ಕೈಗೊಳ್ಳುವುದರ ಜತೆಗೆ ಸಾಮೂಹಿಕ ಇಷ್ಟಲಿಂಗ ಪೂಜೆಯಲ್ಲಿ ಭಾಗಿಯಾವುದರಿಂದ ದೇವರ ಒಲುಮೆ ಆಗುತ್ತದೆ.

| ನಾಡೋಜ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು

ಅನುಭವ ಮಂಟಪ ಟ್ರಸ್ಟ್​ನ ಅಧ್ಯಕ್ಷರು ಬಸವಕಲ್ಯಾಣ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net