ಈ ಬಾರಿ ಗೆಲುವು ನಿಶ್ಚಿತ

JDS
Published on


ಮಂಡ್ಯ : ಕ್ಷೇತ್ರದ ಜನರ ಹೆಚ್ಚಿನ ಒಲವು ನನ್ನ ಪರವಿದ್ದು, ಈ ಬಾರಿ ನನ್ನ ಗೆಲುವು ನಿಶ್ಚಿತ ಎಂದು ಜೆಡಿಎಸ್ ಅಭ್ಯರ್ಥಿ ಎಚ್.ಟಿ.ಮಂಜು ವಿಶ್ವಾಸ ವ್ಯಕ್ತಪಡಿಸಿದರು.


ಕೆ.ಆರ್.ಪೇಟೆ ತಾಲೂಕಿನ ಶೀಳನೆರೆ ಗ್ರಾಮದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶೇ.40 ಕಮಿಷನ್ ತೆಗೆದುಕೊಂಡರೆ ಗುಣಮಟ್ಟದ ರಸ್ತೆಗಳನ್ನು ನಿರ್ಮಾಣ ಮಾಡಲು ಹೇಗೆ ಸಾಧ್ಯ? ರಸ್ತೆಗಳನ್ನು ಗುಣಮಟ್ಟದಿಂದ ನಿರ್ಮಿಸಬೇಕೆಂದು ಗುತ್ತಿಗೆದಾರನಿಗೆ ಹೇಳಿ ಮಾಡಿಸಬೇಕಿತ್ತು. ಅದನ್ನು ಬಿಟ್ಟು ಕಮಿಷನ್ ಪಡೆದರೆ ರಸ್ತೆಗಳು ಹಾಳಾಗದೆ ಇರುತ್ತವೆಯೇ ಎಂದು ಸಚಿವ ಕೆ.ಸಿ.ನಾರಾಯಣಗೌಡರ ವಿರುದ್ಧ ವಾಗ್ದಾಳಿ ನಡೆಸಿದರು.


ಕ್ಷೇತ್ರದ ಜನತೆ ಹಣಕ್ಕಾಗಿ ನಿಮ್ಮ ಮತ ಮಾರಿಕೊಳ್ಳದೆ, ಕೆಟ್ಟು ನಿಂತಿರುವ ಆಡಳಿತ ವ್ಯವಸ್ಥೆಯನ್ನು ಸರಿಪಡಿಸಲು ನನ್ನ ಗೆಲುವಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಬಿಜೆಪಿಯ ಎಸ್.ಎಸ್.ಪಾಂಡು ಮತ್ತು ಬೆಂಬಲಿಗರು ಜೆಡಿಎಸ್ ಸೇರ್ಪಡೆಗೊಂಡರು.


ರಾಜ್ಯ ಮಾರಾಟ ಮಹಾಮಂಡಳದ ನಿರ್ದೇಶಕ ಎಸ್.ಎಲ್.ಮೋಹನ್, ಎಂಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಚ್.ಕೆ.ಅಶೋಕ್, ತಾಲೂಕು ಜೆಡಿಎಸ್ ಅಧ್ಯಕ್ಷ ಜಾನಕೀರಾಮು, ಜಿಲ್ಲಾ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಬಿ.ಎಂ.ಕಿರಣ್, ಮನ್ಮುಲ್ ಮಾಜಿ ಅಧ್ಯಕ್ಷ ಎಂ.ಬಿ.ಹರೀಶ್, ಗ್ರಾಪಂ ಸದಸ್ಯ ಸಿದ್ದೇಶ್, ಜಯದೇವಣ್ಣ, ವಕೀಲ ರಾಘು, ರಾಘು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net