ಈದ್ಗಾ ಮೈದಾನದಲ್ಲಿ ಪಾಲಿಕೆಯಿಂದಲೇ ಗಣೇಶ ಪ್ರತಿಷ್ಠಾಪಿಸಿ

kathare
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ನಗರದ ಚನ್ನಮ್ಮ ವೃತ್ತದ ಬಳಿಯ ಈದ್ಗಾ ಮೈದಾನದಲ್ಲಿ ಹು-ಧಾ ಮಹಾನಗರ ಪಾಲಿಕೆ ವತಿಯಿಂದ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಉತ್ಸವ ಆಚರಿಸಬೇಕು. ಬೇರೆಯವರಿಗೆ ಅವಕಾಶ ಕೊಡಬಾರದು ಎಂದು ಸ್ಥಳೀಯರಾದ ರಾಘವೇಂದ್ರ ಕಠಾರೆ ಹೇಳಿದರು.

ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 2 ವರ್ಷದಿಂದ ಈದ್ಗಾ ಮೈದಾನದಲ್ಲಿ ಚನ್ನಮ್ಮ ಮೈದಾನ ಗಜಾನನ ಉತ್ಸವ ಮಂಡಳಕ್ಕೆ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ. ಅವರು ಖರ್ಚು- ವೆಚ್ಚ ಬಹಿರಂಗ ಪಡಿಸಿಲ್ಲ. ಖರ್ಚು-ವೆಚ್ಚದ ಬಗ್ಗೆ ಕೇಳಿದರೆ ಸರಿಯಾಗಿ ಉತ್ತರ ನೀಡದೆ ಜಾರಿಕೊಳ್ಳುತ್ತಿದ್ದಾರೆ. ಈ ಬಾರಿ ಅವರಿಗೆ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಬಾರದು ಎಂದರು.

ಎರಡು ವರ್ಷ ನಡೆಸಿದ ಗಣೇಶ ಉತ್ಸವದ ಸಂದರ್ಭದಲ್ಲಿ ಕಾಣಿಕೆ ಡಬ್ಬಿಯಲ್ಲಿ ಎಷ್ಟು ಹಣ ಸಂಗ್ರಹವಾಗಿದೆ? ಭಕ್ತರು ನೀಡಿದ ದೇಣಿಗೆ ರಸೀದಿ ಹಾಗೂ ಜಮಾ ಆದ ಹಣ ಬಹಿರಂಗಪಡಿಸಬೇಕು. ಇಲ್ಲದಿದ್ದರೆ ನೈತಿಕ ಹೊಣೆ ಹೊತ್ತು ಉತ್ಸವ ಜವಾಬ್ದಾರಿಯಿಂದ ಹಿಂದೆ ಸರಿಸಬೇಕು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಂಜೀವ ಪಟದಾರಿ, ಸಂತೋಷ ಮೆಹರವಾಡೆ, ಸಿದ್ದಪ್ಪ ಭೋವಿ, ಪ್ರೇಮಾ ಪೂಜಾರ, ಕಿರಣ ಬಾಕಳೆ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net