

ಬೀದರ್: ಭಾಲ್ಕಿ ಕ್ಷೇತ್ರದಿಂದ ಸತತ ನಾಲ್ಕನೇ ಬಾರಿಗೆ ಆಯ್ಕೆಯಾಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರಿಗೆ ಸಚಿವ ಸ್ಥಾನ ಕೊಡಬೇಕು ಎಂದು ಕಾಂಗ್ರೆಸ್ ಎಸ್.ಟಿ. ವಿಭಾಗದ ಜಿಲ್ಲಾ ಘಟಕದ ಉಪಾಧ್ಯಕ್ಷ ರಾಜಕುಮಾರ ಕಂದಗೂಳೆ ಆಗ್ರಹಿಸಿದ್ದಾರೆ.
ಕಲ್ಯಾಣ ಕರ್ನಾಟಕದ ಉಸ್ತುವಾರಿಯಾಗಿ ಈ ಭಾಗದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೇರು ಮಟ್ಟದಿಂದ ಬಲಪಡಿಸಿದ ಶ್ರೇಯ ಈಶ್ವರ ಖಂಡ್ರೆ ಅವರಿಗೆ ಸಲ್ಲುತ್ತದೆ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ನಿರಂತರ ಶ್ರಮಿಸಿದ್ದಾರೆ ಎಂದು ಹೇಳಿದ್ದಾರೆ.
ಈಶ್ವರ ಖಂಡ್ರೆ ಅವರು ದೂರದೃಷ್ಟಿಯ ನಾಯಕರಾಗಿದ್ದಾರೆ. ಜಿಲ್ಲೆ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಯ ಕನಸು ಹೊತ್ತುಕೊಂಡಿದ್ದಾರೆ. ಯಾವುದೇ ಹುದ್ದೆ ನೀಡಿದರೂ ಅದಕ್ಕೆ ನ್ಯಾಯ ದೊರಕಿಸಿಕೊಡುವ ಸಾಮಥ್ರ್ಯ ಹೊಂದಿದ್ದಾರೆ. ಹೀಗಾಗಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.