ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

1645447685340
Published on

ವಿಜಯಪುರ: ಕೆಂಪುಕೋಟೆ ಮೇಲೆ ಕೇಸರಿ ಬಾವುಟ ಹಾರಿಸುತ್ತೇವೆ ಎಂದು ರಾಷ್ಟ್ರಧ್ವಜದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಈಶ್ವರಪ್ಪ ಅವರ ಸಂವಿಧಾನ ವಿರೋಧಿ ಹೇಳಿಕೆಯನ್ನು ಖಂಡಿಸಿ ವಿಜಯಪುರದಲ್ಲಿಂದು ಡಾ. ಬಿ ಆರ್ ಅಂಬೇಡ್ಕರ್ ವೃತ್ತದ ಮುಂದೆ ಪ್ರತಿಭಟನೆ ಮಾಡಲಾಯಿತು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವಿಜಯಪುರ ಜಿಲ್ಲೆಯ ಕಾಂಗ್ರೆಸ್ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಸಚಿವ ಈಶ್ವರಪ್ಪನವರು ಭಾರತದ ಭಾವುಟದ ಕುರಿತು ವಿವಾದಾತ್ಮಕ ಹೇಳಿಕೆಯನ್ನು ಹೇಳಿದ್ದಾರೆ. ಹೀಗಾಗಿ ಅವರನ್ನು ಸಚಿವ ಸ್ಥಾನದಿಂದ ಕೈ ಬಿಡಬೇಕು ಎಂದು ಆಗ್ರಹಿಸಿ ಅಂಬೇಡ್ಕರ ವೃತ್ತದಿಂದ ಕಾಲ್ನಡಿಗೆಯ ಮುಖಾಂತರ ಜಿಲ್ಲಾಧಿಕಾರಿ ಕಛೇರಿಗೆ ಆಗಮಿಸಿ ಸಾಂಕೇತಿಕ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಾಜು ಆಲಗೂರ, ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ವೈಜ್ಯನಾಥ ಕರ್ಫೂರಮಠ, ವಿಜಯಪುರ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಮೀರ ಭಕ್ಷಿ, ಜಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಆರತಿ ಶಹಾಪೂರ, ಮಹಿಳಾ ಘಟಕದ ಅಧ್ಯಕ್ಷೆ ವಿದ್ಯಾರಾಣಿ ತುಂಗಳ ಕಾಂಗ್ರೆಸ್ ಮುಖಂಡರಾದ ಸೋಮನಾಥ ಕಳ್ಳಿಮನಿ, ಸೇವಾದಳದ ಘಟಕದ ಅಧ್ಯಕ್ಷ ಗಂಗಾಧರ ಸಂಬಣ್ಣಿ, ಕಾರ್ಯದರ್ಶಿ ವಸಂತ ಹೊನ್ಮೊಡೆ, ಕಾಂತಾ ನಾಯಕ ಮುಂತಾದವರು ಭಾಗಿಯಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net