

ಅರಕಲಗೂಡು: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಪಟ್ಟಣದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಅನಕೃ ಸರ್ಕಲ್‌ನಲ್ಲಿ ಸೇರಿದ ಪ್ರತಿಭಟನಾಕಾರರು, ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ದಾಳಿ ಖಂಡಿಸಿದರು.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರಕೃತಿ ಸೌಂದರ್ಯ ಸವಿಯಲು ಬಂದಿದ್ದ ಪ್ರವಾಸಿಗರಲ್ಲಿ ಹಿಂದುಗಳನ್ನು ಗುರಿಯಾಗಿಸಿಕೊಂಡು ದಯನೀಯವಾಗಿ ಹತ್ಯೆ ಮಾಡಿದ್ದಾರೆ. ಉಗ್ರರನ್ನು ನಿರ್ಮೂಲನೆ ಮಾಡಲು ಭಯೋತ್ಪಾದಕ ಸಂಘಟನೆ ಮೇಲೆ ಯುದ್ಧ ಸಾರಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಅನಕೃ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಲಾಯಿತು. ಪಪಂ ಅಧ್ಯಕ್ಷ ಪ್ರದೀಪ್ ಕುಮಾರ್, ಮಾಜಿ ಅಧ್ಯಕ್ಷ ನಂದಕುಮಾರ್, ಮುಖಂಡರಾದ ಲೋಕೇಶ್, ಗೋಪಾಲ್, ಗಣೇಶ್, ಮಂಜುನಾಥ್, ಶಶಿಕುಮಾರ್ ಇತರರು ಪಾಲ್ಗೊಂಡಿದ್ದರು.