ಉಗ್ರರ ನೆಲೆ ಧ್ವಂಸಗೊಳಿಸಿದ ಯೋಧರಿಗೆ ಕೃತಜ್ಞತೆ ಸಮರ್ಪಣೆ

Congress
Published on

ಚಿತ್ರದುರ್ಗ: ದೇಶದ ಯೋಧರು ನಡೆಸಿದ ಆಪರೇಷನ್ ಸಿಂಧೂರ ಯಶಸ್ವಿಯಾಗಿರುವುದಕ್ಕೆ ಜಿಲ್ಲಾ ಯುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಗುರುವಾರ ರಕ್ತದಾನದ ಭಾರತದ ಸೈನಿಕರಿಗೆ ಕೃತಜ್ಞತೆ ಸಮರ್ಪಿಸಿದರು.

ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರು ಕಳೆದ ತಿಂಗಳು ನಡೆಸಿದ ಗುಂಡಿನ ದಾಳಿಯಲ್ಲಿ 26 ಮಂದಿ ಅಮಾಯಕರು ಬಲಿಯಾದರು. ಇದಕ್ಕೆ ಪ್ರತಿಕಾರದ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದ್ದಾರೆ ಎಂದು ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರಮೋದಿ ಅವರು ಯೋಧರನ್ನು ಹುರಿದುಂಬಿಸಿ, ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮೂಲಕ ಶತ್ರು ರಾಷ್ಟ್ರಕ್ಕೆ ನುಗ್ಗಿಸಿ, ಉಗ್ರಗಾಮಿಗಳನ್ನು ಸದೆ ಬಡಿದು ಭಾರತದ ಶಕ್ತಿಯನ್ನು ವಿಶ್ವಕ್ಕೆ ತೋರಿಸಿದ್ದಾರೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕಾರೆಹಳ್ಳಿ ಉಲ್ಲಾಸ್ ಹೇಳಿದರು.

ಯೂತ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸೈಯದ್ ಸಾಧಿಕ್, ಕಾರ್ಯದರ್ಶಿ ವೈಶಾಖ್‌ಯಾದವ್, ವಸೀಂ, ತಾಲೂಕು

ಅಧ್ಯಕ್ಷ ಶ್ಯಾಮಣ್ಣ, ಆದರ್ಶ್, ನಗರಾಧ್ಯಕ್ಷ ಪವನ್, ಉಪಾಧ್ಯಕ್ಷ ಕಲೀಲ್, ವಿವಿಧ ತಾಲೂಕಿನ ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಧನಂಜಯ್, ಪವನ್, ಗಿರೀಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net