ಉಚಿತ ಹೊಲಿಗೆ ತರಬೇತಿಗೆ ಅರ್ಜಿ ಆಹ್ವಾನ

Published on

ಚಾಮರಾಜನಗರ: ಎಸ್.ಬಿ.ಐ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗ ಯುವತಿಯರಿಗೆ ಊಟ-ವಸತಿಗಳೊಂದಿಗೆ ಉಚಿತ ಮಹಿಳಾ ಹೊಲಿಗೆ ತರಬೇತಿಯನ್ನು ನೀಡಲಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಜ.20 ರಿಂದ 30 ದಿನಗಳವರೆಗೆ ತರಬೇತಿ ನೀಡಲಾಗುತ್ತದೆ.

18 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಪಡಿತರ ಚೀಟಿ ನಕಲು ಪ್ರತಿ ಮತ್ತು 4 ಭಾವಚಿತ್ರಗಳನ್ನು ಸಲ್ಲಿಸಬೇಕು. ತರಬೇತಿಯನ್ನು ಮಾದಾಪುರ ಸಂತೆಮರಳ್ಳಿ ರಸ್ತೆಯ ಪೆಟ್ರೋಲ್ ಬಂಕ್ ಎದುರಿನ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟಲ್ ಕಟ್ಟಡ ಎಸ್.ಬಿ.ಐ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಮೊ.ಸಂ 9606098878, 8722483393, 9739067155 ಸಂಪರ್ಕಿಸಬಹುದು ಎಂದು ಎಸ್.ಬಿ.ಐ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net