ಉಡುಪಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಪೆಟ್ರೋಲ್ ಬಂಕ್ ಮಾಲೀಕ

Published on


ಉಡುಪಿ: ಪೆಟ್ರೋಲ್ ಬಂಕ್ ಮಾಲೀಕ, ನವ ವಿವಾಹಿತರೊಬ್ಬರು ಬಹುಮಹಡಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ಮಧ್ಯಾಹ್ನ ನಗರದಲ್ಲಿ ನಡೆದಿದೆ. ಉತ್ತಮ ನಾಯಕ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಸಿಟಿ ಬಸ್ ನಿಲ್ದಾಣದ ಮಠದಬೆಟ್ಟು ಎಂಬಲ್ಲಿ ಘಟನೆ ನಡೆದಿದ್ದು, 4 ತಿಂಗಳ ಹಿಂದಷ್ಟೇ ವಿವಾಹವಾಗಿ ಇಲ್ಲಿನ ಫ್ಲಾೃಟ್ ಒಂದರಲ್ಲಿ ನೆಲೆಸಿದ್ದರು ಎಂದು ತಿಳಿದುಬಂದಿದೆ. ಮನೆಯಲ್ಲಿ ತಂದೆ, ತಮ್ಮ ವಾಸವಿದ್ದು, ಪತ್ನಿ ಮುಂಬೈನಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಫ್ಲಾೃಟ್‌ನ 4ನೇ ಮಹಡಿಯಿಂದ ಜಿಗಿದಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಅವರು ಉತ್ತಮ್ ನಾಯಕ್ ಅವರ ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲು ಸಹಕಾರ ನೀಡಿದ್ದು, ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net