ಉಡುಪಿಗೆ ವಾರಾಹಿ ನೀರು ಯೋಜನೆ

varahi
Published on

ಉಡುಪಿ: ವಾರಾಹಿಯಿಂದ ಉಡುಪಿ ನಗರಕ್ಕೆ ನೀರು ಪೂರೈಸುವ ಯೋಜನೆ ಕುರಿತಂತೆ, ವಿಧಾನ ಪರಿಷತ್‌ನ ಅರ್ಜಿ ಸಮಿತಿ ಮಂಗಳವಾರ ಉಡುಪಿಗೆ ಆಗಮಿಸಿ, ಪರಿಶೀಲನೆ ನಡೆಸಿತು. ಪರಿಷತ್ತಿನ ಉಪ ಸಭಾಪತಿ ಹಾಗೂ ವಿಧಾನ ಪರಿಷತ್ತು ಅರ್ಜಿ ಸಮಿತಿ ಅಧ್ಯಕ್ಷ ಎಸ್.ಎಲ್. ಧರ್ಮೇಗೌಡ ಅಧ್ಯಕ್ಷತೆಯಲ್ಲಿ, ಸಮಿತಿ ಸದಸ್ಯರಾದ ಶಾಸಕ ಎಸ್.ವಿ.ಸಂಕನೂರ್, ಮರಿ ತಿಬ್ಬೇಗೌಡ, ಪ್ರಕಾಶ್ ರಾಥೋಡ್, ರಘುನಾಥ್ ಮಲ್ಕಾಪುರ, ಪಿ.ಆರ್. ರಮೇಶ್, ಮೋಹನ್ ಕೊಂಡಾಜಿ ವಾರಾಹಿಯಿಂದ ಉಡುಪಿ ನಗರಕ್ಕೆ ನೀರು ಪೂರೈಸುವ ಯೋಜನೆ ಕಾಮಗಾರಿ ಹಾದುಹೋಗುವ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಮಾಲೋಚನಾ ಸಭೆ ನಡೆಯಿತು. ಶಾಸಕ ಕೆ.ರಘುಪತಿ ಭಟ್, ಕೆ.ಯು.ಐ.ಡಿ.ಎಫ್.ಸಿ ಎಂ.ಡಿ. ಚಾರುಲತಾ, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್. ವಿಷ್ಣುವರ್ಧನ್, ಡಿಎಫ್‌ಓಗಳಾದ ಕಮಲ, ರುದ್ರನ್, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ವಾರಾಹಿ, ನೀರಾವರಿ, ನಗರಾಭಿವೃದ್ಧಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net