ಉತ್ತಮ ಆರೋಗ್ಯ, ಶಿಕ್ಷಣದಿಂದ ನೈಜ ಅಭಿವೃದ್ಧಿ

07-08-Shiva-2
ರಾಯಚೂರಿನ ಎಲ್‌ಬಿಎಸ್ ನಗರದ ನಮ್ಮ ಕ್ಲಿನಿಕ್‌ನಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ದಿನೇಶ ಗುಂಡುರಾವ್ ಮಗುವಿಗೆ ಲಸಿಕೆ ಹಾಕುವ ಮೂಲಕ ಇಂದ್ರಧನುಷ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು. ಸಚಿವ ಎನ್.ಎಸ್.ಬೋಸರಾಜು, ಶಾಸಕರಾದ ಹಂಪಯ್ಯ ನಾಯಕ, ಬಸನಗೌಡ ದದ್ದಲ್, ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲಕುಮಾರ, ಆಯುಕ್ತ ಡಿ.ರಂದೀಪ್, ಅಭಿಯಾನ ನಿರ್ದೇಶಕ ನವೀನ್ ಭಟ್ ಇದ್ದರು.
Published on

ರಾಯಚೂರು: ಉತ್ತಮ ಆರೋಗ್ಯ ಮತ್ತು ಶಿಕ್ಷಣದಿಂದ ಮಾತ್ರ ಸಮಾಜದ ನೈಜ ಅಭಿವೃದ್ಧಿ ಸಾಧ್ಯವಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಎರಡು ಕ್ಷೇತ್ರಗಳಿಗೆ ಹೆಚ್ಚಿನ ಒತ್ತು ನೀಡುತ್ತಿದೆ. ಸರ್ಕಾರದ ಸೌಲಭ್ಯಗಳನ್ನು ಎಲ್ಲರಿಗೂ ಮುಟ್ಟಿಸುವ ನಿಟ್ಟಿನಲ್ಲಿ ಅಕಾರಿಗಳು ಇಚ್ಚಾಶಕ್ತಿಯಿಂದ ಕಾರ್ಯನಿರ್ವಹಿಸಬೇಕು ಎಂದು ಆರೋಗ್ಯ ಖಾತೆ ಸಚಿವ ದಿನೇಶ ಗುಂಡುರಾವ್ ತಿಳಿಸಿದರು.
ಸ್ಥಳೀಯ ಎಲ್‌ಬಿಎಸ್ ನಗರದ ನಮ್ಮ ಕ್ಲಿನಿಕ್‌ನಲ್ಲಿ ಸೋಮವಾರ ಇಂದ್ರಧನುಷ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಅನೇಕ ವರ್ಷಗಳಿಂದ ರೋಗಗಳು ಬಾರದಂತೆ ಲಸಿಕೆಗಳನ್ನು ನೀಡುತ್ತಾ ಬಂದಿದ್ದು, ಅದರಿಂದ ಸಿಡುಬು, ಪ್ಲೇಗ್ ಮಾಯವಾಗಿದೆ. ಈಗ ದಡಾರ, ರುಬೆಲ್ಲಾ ರೋಗ ನಿವಾರಣೆಗೆ ಇಂದ್ರಧನುಷ್ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
ಲಸಿಕೆಗಳ ಬಗ್ಗೆ ಜನರಲ್ಲಿ ಈಗ ಜಾಗೃತಿ ಬಂದಿದ್ದು ಮಕ್ಕಳು, ಗರ್ಭಿಣಿಯರಿಗೆ ಲಸಿಕೆಗಳನ್ನು ಹಾಕಿಸುತ್ತಿದ್ದಾರೆ. ಲಸಿಕೆಗಳು ಎಲ್ಲರಿಗೂ ಮುಟ್ಟಬೇಕು ಎನ್ನುವ ನಿಟ್ಟಿನಲ್ಲಿ 12 ಲಸಿಕೆಗಳನ್ನು ಉಚಿತವಾಗಿ ಇಲಾಖೆ ವತಿಯಿಂದ ಹಾಕಲಾಗುತ್ತಿದ್ದು, ಎಲ್ಲರೂ ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಬೇಕು.
ರಾಜ್ಯದಲ್ಲಿ 1.65 ಲಕ್ಷ ಮಕ್ಕಳು ಲಸಿಕೆ ಪಡೆದಿಲ್ಲ. ಅದರಲ್ಲೂ ರಾಯಚೂರು ಜಿಲ್ಲೆ ಲಸಿಕಾಕರಣದಲ್ಲಿ ಹಿಂದೆ ಇರುವುದರಿಂದ ಜಿಲ್ಲೆಯಿಂದ ಅಭಿಯಾನವನ್ನು ಆರಂಭಿಸಲಾಗುತ್ತಿದೆ. ಜಿಲ್ಲೆಯಲ್ಲಿ ಆರೋಗ್ಯ ಕೇಂದ್ರಗಳಿಗೆ ವೈದ್ಯರು, ಸಿಬ್ಬಂದಿಗಳ ನೇಮಕ, ಸಲಕರಣೆಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ದಿನೇಶ ಗುಂಡುರಾವ್ ತಿಳಿಸಿದರು.
ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಮಾತನಾಡಿ, ಸರ್ಕಾರದ ಕಾರ್ಯಕ್ರಮಗಳು ಜನರಿಗೆ ಮುಟ್ಟಲು ಜನಪ್ರತಿನಿಗಲು, ಅಕಾರಿಗಳು, ಆಶಾ ಕಾರ್ಯಕರ್ತೆಯರು ಒಗ್ಗೂಡಿ ಕೆಲಸ ಮಾಡಬೇಕು. ಈ ಭಾಗದ ಜನರಲ್ಲಿ ತಿಳುವಳಿಕೆ ಕೊರತೆಯಿಂದ ಲಸಿಕೆ ಹಾಕಿಸಲು ಹಿಂದೇಟು ಹಾಕುತ್ತಿದ್ದು, ಅವರ ಮನವೊಲಿಸಿ ಲಸಿಕೆ ಹಾಕಿಸಬೇಕು ಎಂದರು.
ಮಾತನಾಡಿ, ಆರೋಗ್ಯವಿಲ್ಲದಿದ್ದರೆ ಎಷ್ಟೇ ಸಂಪತ್ತು ಇದ್ದರೂ ಉಪಯೋಗವಿಲ್ಲ. ಖಾಯಿಲೆ ಬಂದಾಗ ಚಿಕಿತ್ಸೆ ಪಡೆಯುವುದಕ್ಕಿಂತ ಖಾಯಿಲೆ ಬಾರದಂತೆ ಮುಂಜಾಗ್ರತೆಯಾಗಿ ಲಸಿಕೆ ಹಾಕಿಸಿಕೊಳ್ಳಬೇಕು.
ಜಿಲ್ಲೆಯಲ್ಲಿ ಅತ್ಯಾಧುನಿಕ ಆಸ್ಪತ್ರೆಯಿಲ್ಲ. ಇದರಿಂದ ಜನರು ದೂರದ ಊರುಗಳಿಗೆ ಹೋಗುವಂತಾಗಿದೆ. ಇದ್ದ ಒಪೆಕ್ ಆಸ್ಪತ್ರೆ ಇದ್ದು ಇಲ್ಲದಂತಾಗಿದೆ. ಸಚಿವರು ಇಲಾಖೆಯಿಂದ ಅತ್ಯಾಧುನಿಕ ಆಸ್ಪತ್ರೆ ಆರಂಭಿಸಬೇಕು. ವೈದ್ಯರು ಕೇಂದ್ರ ಸ್ಥಾನದಲ್ಲಿಯೇ ಇರುವಂತೆ ಆದೇಶ ಹೊರಡಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಹಂಪಯ್ಯ ನಾಯಕ, ಬಸನಗೌಡ ದದ್ದಲ್ಪಿ, ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲಕುಮಾರ, ಆಯುಕ್ತ ಡಿ.ರಂದೀಪ್, ಅಭಿಯಾನ ನಿರ್ದೇಶಕ ನವೀನ್ ಭಟ್, ಜಿಲ್ಲಾಕಾರಿ ಚಂದ್ರಶೇಖರ ನಾಯಕ, ಎಸ್ಪಿ ಬಿ.ನಿಖಿಲ್, ಡಿಎಚ್‌ಒ ಡಾ.ಸುರೇಂದ್ರಬಾಬು, ಜಿಲ್ಲಾ ಶಸ ಚಿಕಿತ್ಸಕ ಡಾ.ಎನ್.ವಿಜಯಶಂಕರ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net