ಉತ್ತಮ ಆರೋಗ್ಯ ಸೇವೆ ಒದಗಿಸಿ

24 YERRISWAMY 03
Published on

ಬಳ್ಳಾರಿ : ಸಾರ್ವಜನಿಕರು ಸುಸ್ಥಿರ ಆರೋಗ್ಯ ಕಾಪಾಡಿಕೊಳ್ಳಲು ಆರೋಗ್ಯ ಸಂಸ್ಥೆಗಳು ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಬೇಕು ಎಂದು ಎಡಿಸಿ ಮೊಹಮ್ಮದ್ ಎನ್ ಝುಬೇರ್ ಹೇಳಿದರು.
ನಗರದ ಎಫ್‌ಪಿಎಐ ಕಚೇರಿಯಲ್ಲಿ 75 ನೇ ಸಂಸ್ಥಾಪನಾ ದಿನಾಚರಣೆಯ ಅಮೃತ ಮಹೋತ್ಸವ ಕಾರ್ಯಕ್ರಮ ಅಂಗವಾಗಿ ಮಂಗಳವಾರ ಆಯೋಜಿಸಲಾಗಿದ್ದ ಉಚಿತ ಗರ್ಭಕಂಠದ ಕ್ಯಾನ್ಸರ್ ತಪಾಸಣಾ ಶಿಬಿರದಲ್ಲಿ ಮಾತನಾಡಿದರು. ಆರೋಗ್ಯ ಸಂಸ್ಥೆಗಳು ಆರೋಗ್ಯ ಸೇವೆಗಳನ್ನು ಸಾರ್ವಜನಿಕರ ಕೈಗೆಟಕುವ ಬೆಲೆಯಲ್ಲಿ ಒದಗಿಸಿ, ಸ್ವಚ್ಛತೆ ಹಾಗೂ ಆರೋಗ್ಯಕರವಾದ ವಾತಾವರಣವನ್ನು ಸೃಷ್ಟಿ ಮಾಡಬೇಕು ಎಂದರು.
ಎಫ್‌ಪಿಎಐನ ಅಧ್ಯಕ್ಷ ಟಿ.ಜಿ.ವಿಠ್ಠಲ್ ಮಾತನಾಡಿ, ಹೆಚ್‌ಪಿವಿ ಲಸಿಕೆಯನ್ನು ಸಾರ್ವಜನಿಕರಿಗೆ ರಿಯಾಯಿತಿ ದರದಲ್ಲಿ ಕೊಡಲಾಗುತ್ತಿದೆ. ಆಧುನಿಕ ತಂತ್ರಜ್ಞಾನವಾದ ಸ್ಮಾರ್ಟ ಸ್ಕೋಪ್ ಬಳಸಿ ಗರ್ಭಕಂಠದ ಕ್ಯಾನ್ಸರ್ ಅನ್ನು ಪತ್ತೆ ಮಾಡುವ ವೈದ್ಯಕೀಯ ಸೌಲಭ್ಯವು ಎಫ್‌ಪಿಎಐನಲ್ಲಿ ಲಭ್ಯವಿದೆ ಎಂದು ಮಾಹಿತಿ ನೀಡಿದರು.
ಇದೇ ವೇಳೆ ಸ್ತ್ರೀರೋಗ ತಜ್ಞೆ ಡಾ.ರುಕ್ಸಾರ್ ಭಾನು ಸುಮಾರು 75 ಕ್ಕೂ ಹೆಚ್ಚಿನ ಮಹಿಳೆಯರಿಗೆ ಗರ್ಭಕಂಠದ ಕ್ಯಾನ್ಸರ್ ತಪಾಸಣೆ ಮಾಡಿದರು. ಸಂಸ್ಥೆಯ ಆರ್ಥಿಕ ಸಲಹೆಗಾರ ಡಾ.ಭಾಗ್ಯ, ಸದಸ್ಯರಾದ ವಿಷ್ಣು, ಅಹಿರಾಜ, ಪ್ರಶಾಂತ ಕೇಣಿ, ಗಿರೀಶ, ಶ್ರೀಚೈತನ್ಯ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net