

ಬಸವಕಲ್ಯಾಣ: ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆಗಳು ಸಹಕಾರಿಯಾಗಿವೆ. ವಿದ್ಯಾರ್ಥಿಗಳು ಅಭ್ಯಾಸದ ಜತೆಗೆ ಕ್ರೀಡಾಕೂಟಗಳಲ್ಲಿ ಆಸಕ್ತಿಯಿಂದ ಭಾಗವಹಿಸಬೇಕು ಎಂದು ಸಹಾಯಕ ಆಯುಕ್ತ ಮುಕುಲ ಜೈನ್ ಹೇಳಿದರು.
ಪೂಜ್ಯಶ್ರೀ ದೊಡ್ಡಪ್ಪ ಅಪ್ಪ ತಾಲೂಕು ಕ್ರೀಡಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಮಾಜ ಕಲ್ಯಾಣ ಇಲಾಖೆಯ ೨೦೨೪-೨೫ನೇ ಸಾಲಿನ ತಾಲೂಕು ಮಟ್ಟದ ನಿಲಯಾರ್ಥಿಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಜೀವನದಲ್ಲಿ ಯಾವುದೇ ಸಾಧನೆ ಮಾಡಬೇಕಾದರೆ ಉತ್ತಮ ಆರೋಗ್ಯ ಮುಖ್ಯ. ಶಾರೀರಿಕ ಮತ್ತು ಮಾನಸಿಕ ಸದೃಢತೆ ಕಾಪಾಡಿಕೊಳ್ಳಬೇಕು. ಇದಕ್ಕೆ ಕ್ರೀಡೆಗಳು ಸಹಾರಿಯಾಗುತ್ತವೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ದಿಲೀಪಕುಮಾರ ಉತ್ತಮ ಮಾತನಾಡಿ, ತಾಲೂಕು ಮಟ್ಟದಲ್ಲಿ ಕ್ರೀಡಾಕೂಟದಲ್ಲಿ ಆಯ್ಕೆಯಾದವರು ಡಿ.೨೨ರಿಂದ ನಡೆಯುವ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರವೀಂದ್ರನಾಥ, ತಾಪಂ ಎಡಿ ಸಂತೋಷ ಚವ್ಹಾಣ್, ವಾರ್ಡನ್ ಭೀಮಣ್ಣ, ದೇವೀಂದ್ರ, ದೈಹಿಕ ಶಿಕ್ಷಕರಾದ ಮಂಜುನಾಥ ಮಡಿವಾಳ, ಭಾಗ್ಯಶ್ರೀ, ಮಹಮ್ಮದ್ ಇಸ್ಮಾಯಿಲ್ ಇತರರಿದ್ದರು.