

ಚಿತ್ರದುರ್ಗ: ಮಾನಸಿಕ ಹಾಗೂ ದೈಹಿಕ ಸದೃಢತೆಗೆ ಯೋಗ ಸಹಕಾರಿ ಎಂದು ನಗರದ ದೇವರಾಜ ಅರಸು ಶಿಕ್ಷಣ ಸಂಸ್ಥೆ ಮುಖ್ಯ ಕಾರ‌್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್ ಹೇಳಿದರು.
ನಗರದ ಪತಂಜಲಿ ಯೋಗ ಸಮಿತಿ ಸಹಯೋಗದಲ್ಲಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ನಿತ್ಯ ಒಂದು ತಾಸು ಯೋಗಕ್ಕೆ ಮೀಸಲಿಡಬೇಕೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ನಾಲ್ಕು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಸಾಮೂಹಿಕ ವಿದ್ಯಾಭ್ಯಾಸದಲ್ಲಿ ಭಾಗವಹಿಸಿದ್ದರು. ಶಿಕ್ಷಣ ಸಂಸ್ಥೆ ಬೋಧಕ, ಬೋಧಕೇತರ ಸಿಬ್ಬಂದಿ ಇದ್ದರು.