ಉತ್ತಮ ಆಲೋಚನೆಗಳಿದ್ದರೆ ಜೀವನ ಸಾರ್ಥಕ

RemasterDirector_1a5c03258
RemasterDirector_1a5c03258
Published on

ಪಿರಿಯಾಪಟ್ಟಣ: ಶ್ರೀ ಯೋಗಿ ನಾರೇಯಣ ಯತೀಂದ್ರರ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸುವಂತಾಗಬೇಕು ಎಂದು ಮೈಸೂರು ಮಹಾರಾಜ ಕಾಲೇಜಿನ ಸಹ ಪ್ರಾಧ್ಯಪಕ ಡಾ.ಕೃಷ್ಣಪ್ಪ ತಿಳಿಸಿದರು.

ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಶ್ರೀ ಯೋಗಿ ನಾರೇಯಣ ಯತೀಂದ್ರರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಶ್ರೀ ಯೋಗಿ ನಾರೇಯಣ ಯತೀಂದ್ರರು ತ್ರಿಲೋಕ ಜ್ಞಾನಿಯಾಗಿದ್ದು ಪ್ರತಿಯೊಂದು ಘಟನೆ ಮತ್ತು ಸನ್ನಿವೇಶಗಳನ್ನು ಚೆನ್ನಾಗಿ ಅರಿತ್ತಿದ್ದರು. ಸಂಸ್ಕೃತ ಅಧ್ಯಯನದ ಮೂಲಕ ಕಾಲಜ್ಞಾನ ಕೃತಿ ರಚಿಸಿದ್ದು ಈ ಕೃತಿಯು ಇಂದು ಅನೇಕ ಭಾಷೆಗಳಲ್ಲಿ ಅನುವಾದವಾಗಿದೆ. ಸಾಮಾಜಿಕ ಸಾಮರಸ್ಯ ಮತ್ತು ಉತ್ತಮ ಆಲೋಚನೆಗಳು ಮಾತ್ರ ಮಾನವನ ಜೀವನವನ್ನು ಸಾರ್ಥಕಗೊಳಿಸಲು ಸಾಧ್ಯ ಎಂದು ಜಗತ್ತಿಗೆ ಸಾರಿದ್ದಾರೆ. ಆದ್ದರಿಂದ ಇವರ ತತ್ವ ಆದರ್ಶವನ್ನು ನಾವೆಲ್ಲ ಪಾಲಿಸಬೇಕು ಎಂದರು.

ತಹಸೀಲ್ದಾರ್ ನಿಸರ್ಗಪ್ರಿಯ ಮಾತನಾಡಿ, ಶ್ರೀ ಯೋಗಿ ನಾರೇಯಣ ಯತೀಂದ್ರರು ನೀಡಿರುವ ಆಧ್ಯಾತ್ಮಿಕ ಮತ್ತು ಧಾರ್ಮಿಕ ಸಿದ್ಧಾಂತಗಳು ಇಂದಿಗೂ ಪ್ರಸ್ತುತವಾಗಿವೆ. ತಾಲೂಕಿನಲ್ಲಿ ಬಲಿಜ ಸಮುದಾಯದ ಮುಖಂಡರು ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ನೀಡುವಂತೆ ಬೇಡಿಕೆ ಸಲ್ಲಿಸಿದ್ದು ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಭವನ ನಿರ್ಮಾಣಕ್ಕೆ ಸ್ಥಳವಕಾಶ ಮಾಡಿಕೊಡಲಾಗುವುದು ಎಂದರು.

ಬಲಿಜ ಸಂಘದ ಅಧ್ಯಕ್ಷ ಕಿತ್ತೂರು ಜಗದೀಶ್, ಉಪಾಧ್ಯಕ್ಷ ಸುಬ್ರಮಣ್ಯ ಶೆಟ್ಟಿ, ಕಾರ್ಯಾಧ್ಯಕ್ಷ ವೆಂಕಟೇಶ್, ಕಾರ್ಯದರ್ಶಿ ರಮೇಶ್, ಖಜಾಂಚಿ ಬೋಗೇಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೇಖರ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ವೈ.ಪ್ರಸಾದ್, ಪಶು ಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಸೋಮಯ್ಯ, ಭೂ ಮಾಪನ ಇಲಾಖೆ ಸಹಾಯಕ ನಿರ್ದೇಶಕ ಮುನಿಯಪ್ಪ, ಆಹಾರ ಇಲಾಖೆ ಶಿರಸ್ತೇದಾರ್ ಸಣ್ಣಸ್ವಾಮಿ, ಕಂದಾಯ ಇಲಾಖೆ ಶಿರಸ್ತೇದಾರ್ ಶಕೀಲಾ ಭಾನು, ಕಂದಾಯ ಇಲಾಖೆ ಸಿಬ್ಬಂದಿ ಪಾಂಡು, ಜಯಕುಮಾರ್, ಶೇಖರ್, ಮುಖಂಡರಾದ ನಾಗೇಶ್, ರಮೇಶ್, ರಾಜಣ್ಣ, ರಘು, ವಿಜಯ್ ಕುಮಾರ್ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net