ಉತ್ತಮ ನಾಯಕರನ್ನು ಆಯ್ಕೆ ಮಾಡಿ

02 yerriswamy 04..
Published on

ಬಳ್ಳಾರಿ: ಮತದಾನ ಮಾಡಿ ದೇಶದ ಉತ್ತಮ ನಾಯಕರನ್ನು ಆಯ್ಕೆ ಮಾಡಿ ಎಂದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಎಸ್.ಹೆಚ್.ಪುಷ್ಪಾಂಜಲಿ ದೇವಿ ಹೇಳಿದರು.
ಇಲ್ಲಿನ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಾಗೂ ಜಿಲ್ಲಾ ವಕೀಲರ ಸಂಘ ಸಹಯೋಗದೊಂದಿಗೆ ಗುರುವಾರ ನಡೆದ ಪ್ರತಿಜ್ಞಾವಿಧಿ ಭೋದನೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಮತದಾನ ಮಾಡುವುದು ಸಂವಿಧಾನದ ಬಹುಮುಖ್ಯ ಹಕ್ಕಾಗಿದ್ದು, 18 ವರ್ಷ ತುಂಬಿದ ಪ್ರತಿಯೊಬ್ಬ ಅರ್ಹ ಮತದಾರರು ಅವಕಾಶ ವಂಚಿತರಾಗದೇ ತಪ್ಪದೇ ಮತದಾನ ಮಾಡಬೇಕು. ಪ್ರಜಾಪ್ರಭುತ್ವಕ್ಕೆ ಉತ್ತಮ ನಾಯಕರನ್ನೇ ಆಯ್ಕೆ ಮಾಡಬೇಕು ಎಂದರು.ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಮಾತನಾಡಿ, ಮತದಾನ ದಿನದಂದು ಮತಗಟ್ಟೆ ಕೇಂದ್ರಗಳ ಬಳಿ ಶ್ಯಾಮಿಯಾನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ನೆರಳಿನ ವ್ಯವಸ್ಥೆ, ಶೌಚಾಲಯ ಸೇರಿದಂತೆ ಗರ್ಭೀಣಿಯರಿಗೆ, ಹಿರಿಯ ನಾಗರಿಕರಿಗೆ ಮತ್ತು ಅಂಗವಿಕಲರಿಗೆ ಪ್ರತ್ಯೇಕ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net