

ಚಿತ್ರದುರ್ಗ: ಗುಣಮಟ್ಟದ ಶಿಕ್ಷಣದ ಮೂಲಕ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಶೈಕ್ಷಣಿಕ ಭಾಗೀದಾರರ ಪಾತ್ರ ಮುಖ್ಯವಾಗಿದೆ ಎಂದು ಡಯಟ್ ಪ್ರಾಚಾರ್ಯ ಎಂ. ನಾಸಿರುದ್ದೀನ್ ಹೇಳಿದರು.
ನಗರದ ಡಯಟ್‌ನಲ್ಲಿ ಫಲಿತಾಂಶ ಉತ್ತಮಪಡಿಸುವ ಸಂಬಂಧ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳ ಮುಖ್ಯಶಿಕ್ಷಕರಿಗೆ ಶನಿವಾರ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಮುಖ್ಯಶಿಕ್ಷಕರು ಮತ್ತು ವಿಷಯ ಶಿಕ್ಷಕರ ಸಮನ್ವಯತೆಯಿಂದ ಮಕ್ಕಳ ಕಲಿಕಾ ಪ್ರಗತಿ ಹೆಚ್ಚಿಸಬೇಕು ಎಂದರು. ನೋಡಲ್ ಅಧಿಕಾರಿ ಎಸ್.ಸಿ. ಪ್ರಸಾದ್ ಮಾತನಾಡಿ, ಉತ್ತಮ ಫಲಿತಾಂಶಕ್ಕಾಗಿ ಜಿಲ್ಲೆಯ ಎಲ್ಲ ಸರ್ಕಾರಿ ಹಾಗೂ ಆಯ್ದ ಅನುದಾನಿತ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರಿಗೆ ತರಬೇತಿ ನೀಡಲಾಗುತ್ತಿದೆ. ಇದರಲ್ಲಿ ಪೋಕ್ಸೋ ಕಾಯಿದೆ ಕುರಿತು ಮಾಹಿತಿ ನೀಡಲಾಗುತ್ತದೆ ಎಂದರು. ಸಂಪನ್ಮೂಲ ವ್ಯಕ್ತಿಗಳಾದ ಪ್ರಶಾಂತ್, ಶಿವಣ್ಣ, ಶ್ರೀನಿವಾಸ್, ಜಿ.ಎಸ್. ನಾಗರಾಜು, ತಿಮ್ಮರಾಜು, ಉಪನ್ಯಾಸಕರಾದ ಸಿ.ಎಸ್. ಲೀಲಾವತಿ, ಶಿವಲೀಲಾ, ವಿ.ಕನಕಮ್ಮ ಇತರರು ಇದ್ದರು.