ಉತ್ತಮ ಭವಿಷ್ಯಕ್ಕಾಗಿ ಪರಿಸರ ಸಂರಕ್ಷಿಸಿ

08Kush005
ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶುಕ್ರವಾರ ವನ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಸತೀಶ್ ಕಾಳೇಗೌಡ ಗಿಡ ನೆಟ್ಟರು. ಆರ್‌ಎಫ್‌ಒ ಶಿವರಾಂ, ಟಿ.ಜಿ.ಪ್ರೇಮಕುಮಾರ್, ಎಂ.ಎನ್.ಚಂದ್ರಮೋಹನ್, ಜಿ.ಜಯಣ್ಣ, ಇತರರು ಇದ್ದರು.
Published on

ಕುಶಾಲನಗರ: ಸುತ್ತಮುತ್ತಲಿನ ಪರಿಸರದಲ್ಲಿ ಹೆಚ್ಚು ಗಿಡಗಳನ್ನು ಬೆಳೆಸುವ ಮೂಲಕ ಉತ್ತಮ ಭವಿಷ್ಯಕ್ಕಾಗಿ ಪರಿಸರ ಸಂರಕ್ಷಣೆಗೆ ಪಣ ತೊಡಬೇಕಾಗಿದೆ ಎಂದು ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಸತೀಶ್ ಕಾಳೇಗೌಡ ಹೇಳಿದರು.


ಅರಣ್ಯ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಕೊಡಗು ಜಿಲ್ಲಾ ಘಟಕ, ಕಾವೇರಿ ಪರಿಸರ ಬಳಗ, ಕಾಲೇಜಿನ ಎನ್‌ಎಸ್‌ಎಸ್ ಘಟಕದ ಸಹಯೋಗದಲ್ಲಿ ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ನಮ್ಮ ನಡೆ ಹಸಿರೆಡೆಗೆ ಹಾಗೂ ‘ನನ್ನ ಗಿಡ ನನ್ನ ಹೆಮ್ಮೆ’ ಅಂಗವಾಗಿ ಇತ್ತೀಚೆಗೆ ಆಯೋಜಿಸಿದ್ದ ವನ ಮಹೋತ್ಸವ ಸಪ್ತಾಹ 2023ರ ಅಂಗವಾಗಿ 350 ಅರಣ್ಯ ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.


ಪರಿಸರ ಸಂರಕ್ಷಣೆ ಕುರಿತು ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್‌ನ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್ ಪ್ರತಿಜ್ಞೆ ಬೋಧಿಸಿದರು.
ಕುಶಾಲನಗರ ವಲಯ ಅರಣ್ಯಾಧಿಕಾರಿ ಕೆ.ವಿ.ಶಿವರಾಂ ಮಾತನಾಡಿದರು. ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ ಸಮಿತಿ ಸದಸ್ಯ ಎಂ.ಎನ್.ವೆಂಕಟನಾಯಕ್, ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ಜಿ.ಜಯಣ್ಣ, ಕಾಲೇಜಿನ ಮೇರಿ, ಉಪನ್ಯಾಸಕರಾದ ಟಿ.ರಾಜಣ್ಣ, ಉಮಾಪತಿ, ವಿಜಯ್, ಮಮತಾ, ಸ್ಮಿತಾ, ಡಿಆರ್‌ಎಫ್‌ಒ ಕೆ.ಎನ್.ದೇವಯ್ಯ, ಶ್ರವಣಕುಮಾರ್ ವಿಭೂತಿ, ಚೇತನ್, ಗಸ್ತು ವನ ಪಾಲಕ ವಿ.ಎಸ್. ಮಂಜೇಗೌಡ, ಸಿದ್ದರಾಮ ನಾಟೀಕರ್, ದಿನೇಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net