ಉತ್ತಮ ಸಂಸ್ಕಾರ, ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ

11BK4
ಬಸವಕಲ್ಯಾಣದ ಎಸ್‌ಎಸ್‌ಕೆ ಬಸವೇಶ್ವರ ಕಾಲೇಜಿನಲ್ಲಿ ನಡೆದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ವಿವಿಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪ್ರಾಚಾರ್ಯ ಡಾ.ಶಿವಕುಮಾರ ಪಾಟೀಲ್, ನಿವೃತ್ತ ಪ್ರಾಚಾರ್ಯ ಡಾ.ಬಸವರಾಜ ಎವಲೆ, ಪ್ರೊ.ಅಶೋಕಕುಮಾರ ಶ್ರೀವಾಸ್ತವ, ಎಂ.ಜಿ.ಪಾಟೀಲ್, ಅಶ್ವಿನಿ ಜಲಾದೆ ಇದ್ದರು.
Published on

ಬಸವಕಲ್ಯಾಣ: ವಿದ್ಯಾರ್ಥಿಗಳು ಶಿಕ್ಷಣ ಜತೆಗೆ ಉತ್ತಮ ಸಂಸ್ಕಾರ, ಮಾನವೀಯ ಮೌಲ್ಯ ಬೆಳೆಸಿಕೊಂಡರೆ ಸಮಾಜದಲ್ಲಿ ಸ್ಥಾನಮಾನ ಪಡೆಯಲು ಸಾಧ್ಯವಾಗಲಿದೆ ಎಂದು ನಿವೃತ್ತ ಪ್ರಾಚಾರ್ಯ ಡಾ.ಬಸವರಾಜ ಎವಲೆ ಹೇಳಿದರು.

ನಗರದ ಎಸ್‌ಎಸ್‌ಕೆ ಬಸವೇಶ್ವರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಸ್ನಾತಕ ಮತ್ತು ಸ್ನಾತಕೋತ್ತರ ಮಹಾವಿದ್ಯಾಲಯದಲ್ಲಿ ಮಂಗಳವಾರ ಏರ್ಪಡಿಸಿದ್ದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಅಕಾಡೆಮಿ ಸಮಾರೋಪ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ಸಮಯಪ್ರಜ್ಞೆಯೊಂದಿಗೆ ಪರಿಶ್ರಮ ಪಟ್ಟರೆ ಇಟ್ಟುಕೊಂಡ ಗುರಿಯನ್ನು ಸರಳವಾಗಿ ಸಾಧಿಸಬಹುದು ಎಂದರು.

ವಿದ್ಯಾರ್ಥಿ ಜೀವನದಲ್ಲಿ ಮೊಬೈಲ್ ಪಿಡುಗಾಗಿ ಕಾಡುತ್ತಿದೆ. ಅತಿಯಾದ ಮೊಬೈಲ್ ಬಳಸದೆ ಸಮಯದ ಸದ್ಬಳಕೆ ಮಾಡಿಕೊಳ್ಳಬೇಕು. ರೀಲ್ ಬದಲು ರಿಯಲ್ ಹೀರೊಗಳನ್ನು ಮಾದರಿಯಾಗಿ ಇಟ್ಟುಕೊಂಡು ಆಸಕ್ತಿ, ಅಭಿರುಚಿ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕು. ಜನ್ನ ನೀಡಿದ ತಂದೆ-ತಾಯಿ ಹಾಗೂ ಕಲಿಸಿದ ಅಕ್ಷರ ದೇಗುಲಕ್ಕೆ ಕೀರ್ತಿ ತರಬೇಕು ಎಂದು ಕಿವಿಮಾತು ಹೇಳಿದರು.

ಪ್ರೊ.ಅಶೋಕಕುಮಾರ ಶ್ರೀವಾಸ್ತವ ಮಾತನಾಡಿ, ಶ್ರಮವಹಿಸಿ ಅಭ್ಯಸಿಸುವ ಜತೆಗೆ ಜೀವನದಲ್ಲಿ ಆದರ್ಶ ಮೌಲ್ಯಗಳನ್ನು ಬೆಳೆಸಿಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕು. ಸಮಾಜಕ್ಕೆ ಒಳ್ಳೆಯದನ್ನು ಮಾಡಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ.ಶಿವಕುಮಾರ ಪಾಟೀಲ್ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು, ಸಮಯಪ್ರಜ್ಞೆ, ಸಾಧಿಸುವ ಗುರಿ ಹೊಂದುವುದಷ್ಟೇ ಮುಖ್ಯವಲ್ಲ. ಗೌರವ ಮತ್ತು ಜವಾಬ್ದಾರಿಯುತವಾಗಿ ನಡೆದುಕೊಳ್ಳುವುದು ಅತಿ ಮುಖ್ಯವಾಗಿದೆ ಎಂದರು.

ಪ್ರೊ.ಆರ್.ಡಿ. ಬಾಲಿಕಿಲೆ, ಪ್ರೊ.ವಿಠೋಬಾ ಡೊಣ್ಣೇಗೌಡರ್, ಲಕ್ಷ್ಮೀಬಾಯಿ ಬಂಕೂರ, ಗ್ರಂಥಪಾಲಕ ಸೂರ್ಯಕಾಂತ ನಾಸೆ, ಅಶ್ವಿನಿ ಜಲಾದೆ, ದೀಪಕ ಕಾಡಾದಿ, ಇಂದ್ರಜೀತ್ ರೆಡ್ಡಿ, ಮಹಾದೇವ ಡಿ., ಸತೀಶ್ ರಾಠೋಡ್, ಶಿವಾನಂದ ಬಿ., ಭೀಮಾಶಂಕರ ಇತರರಿದ್ದರು.

ಐಕ್ಯುಎಸಿ ಸಂಯೋಜಕ ಡಾ.ರಮೇಶ ಕೆ.ಬಿ. ಸ್ವಾಗತಿಸಿದರು. ಡಾ.ಎಂ.ಜಿ. ಪಾಟೀಲ್ ವಂದಿಸಿದರು. ದೀಪಿಕಾ ಮತ್ತು ಕೀರ್ತಿ ನಿರೂಪಣೆ ಮಾಡಿದರು. ರಾಜಶ್ರೀ ಪ್ರಾರ್ಥನಾ ಗೀತೆ ಹಾಡಿದರು. ಗೌರಮ್ಮ ಅತಿಥಿಗಳನ್ನು ಪರಿಚಯಿಸಿದರು. ವಿವಿಧ ಸ್ಪರ್ಧೆಯಲ್ಲಿ ವಿಜೇತ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಪ್ರೋತ್ಸಾಹಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net