

ವಿಜಯವಾಣಿ ಸುದ್ದಿಜಾಲ ಧಾರವಾಡ
ಶಾಲೆಗಳಲ್ಲಿ ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರ ನೀಡಿದಾಗಲೇ ರಾಷ್ಟ್ರದ ಉತ್ಥಾನ ಸಾಧ್ಯ ಎಂದು ರಾಷ್ಟ್ರೋತ್ಥಾನ ಪರಿಷತ್ ಸದಸ್ಯ ಅಶೋಕ ಸೋನಕರ ಅಭಿಪ್ರಾಯಪಟ್ಟರು.
ನಗರದ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ಶನಿವಾರ ಏರ್ಪಡಿಸಿದ್ದ 10ನೇ ವರ್ಗದ ವಿದ್ಯಾರ್ಥಿಗಳ ಸಂಕಲ್ಪೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಶಾಲೆಯಲ್ಲಿ ಪಡೆದ ಸಂಸ್ಕಾರವನ್ನು ಇನ್ನೊಬ್ಬರಿಗೆ ಹಂಚುವ ಗುಣ ಬೆಳೆಸಿಕೊಂಡಾಗ ಮಾತ್ರ ದೇಶದ ಸತ್ಪ್ರಜೆಗಳಾಗಿ ಬಾಳುವುದರ ಜೊತೆಗೆ ಸದೃಢ ರಾಷ್ಟ್ರ ಕಟ್ಟಲು ಸಾಧ್ಯ ಎಂದರು.
ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದ ಕಾರ್ಯದರ್ಶಿ ರಾಘವೇಂದ್ರ ಅಂಬೇಕರ ಪ್ರಸ್ತಾವಿಕವಾಗಿ ಮಾತನಾಡಿದರು. ಶಾಲೆ ಉಪ ಪ್ರಾಚಾರ್ಯ ಕೃಷ್ಣ ಜೋಶಿ 10ನೇ ತರಗತಿ ಮಕ್ಕಳಿಗೆ ಸಂಕಲ್ಪವನ್ನು ಬೋಧಿಸಿದರು.
ಆಡಳಿತಾಧಿಕಾರಿ ಕುಮಾರಸ್ವಾಮಿ ಕುಲಕರ್ಣಿ, ಪ್ರಾಚಾರ್ಯ ಡಾ. ಅನಿತಾ ರೈ, ಪಾಲಕರು, ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿ, ಇತರರು ಇದ್ದರು. ರಂಗನಾಥ ಕುಲಕರ್ಣಿ ಸ್ವಾಗತಿಸಿದರು. ಶಿವರಾಜ ಭಟ್ ನಿರೂಪಿಸಿದರು. ವಿನಾಯಕ ಭಟ್ ವಂದಿಸಿದರು.