ಉತ್ತಮ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ

Published on

ಹನೂರು: ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯ ದಿನ ಆಚರಿಸಲಾಯಿತು.

ತಹಸೀಲ್ದಾರ್ ಎನ್.ಕೆ ಚೈತ್ರಾ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಹಲವು ಮಹನೀಯರು ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟಿದ್ದರು. ಹಾಗಾಗಿ ಸ್ವಾತಂತ್ರ್ಯ ದಿನವನ್ನು ಆಚರಿಸುವ ನಮ್ಮ ಮುಖ್ಯ ಗುರಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ನಾಯಕರ ಧೈರ್ಯ, ಸಾಹಸ ಹಾಗೂ ಆದರ್ಶಗಳನ್ನು ಯುವ ಪೀಳಿಗೆಗೆ ತಿಳಿಸಿ ಕೊಡುವುದಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಈ ಬಗ್ಗೆ ಮನದಟ್ಟು ಮಾಡಿಕೊಳ್ಳುವುದರ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು. ಇದರಿಂದ ಸುಭದ್ರ ರಾಷ್ಟ್ರ ನಿರ್ಮಿಸಬಹುದು ಎಂದು ತಿಳಿಸಿದರು. ಉಪ ತಹಸೀಲ್ದಾರ್ ನಾಗೇಂದ್ರ, ಆರ್‌ಐ ಶೇಷಣ್ಣ, ತಾಲೂಕು ಆಹಾರ ನಿರೀಕ್ಷಕ ವಿಷ್ಣುಮೂರ್ತಿ, ಗ್ರಾಮ ಆಡಳಿತ ಅಧಿಕಾರಿಗಳಾದ ಲೋಕೇಶ್, ಪುನೀತ್, ಸಿಬ್ಬಂದಿ ಸಿದ್ದರಾಜು, ಶೇಖರ್, ಪ್ರದೀಪ್ ಹಾಗೂ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net