ಉತ್ತಮ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಪ್ರಮುಖ

1730031067094
Published on

ಸೋಮವಾರಪೇಟೆ: ಮಹಿಳಾ ಸಹಕಾರ ಸಂಘದ ವಜ್ರ ಮಹೋತ್ಸವ ಸಮಾರಂಭ ಭಾನುವಾರ ಮಹಿಳಾ ಸಮಾಜದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶಾಸಕ ಡಾ. ಮಂತರ್‌ಗೌಡ ಉದ್ಘಾಟಿಸಿದರು. ನಂತರ ಮಾತನಾಡಿ, ಉತ್ತಮ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಪ್ರಮುಖವಾದುದು. ಮಹಿಳಾ ಸಂಘಟನೆಗಳು ಸಮಾಜಮುಖಿ ಕೆಲಸಗಳನ್ನು ಮಾಡುತಿರುವುದು ಶ್ಲಾಘನೀಯ ಎಂದರು.

ಕೊಡಗು ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕಿ ಶೈಲಜಾ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಂಘದ ಮಾಜಿ ಅಧ್ಯಕ್ಷರಾದ ಶಾರದ ಶಂಕರಪ್ಪ, ಅರುಂಧತಿ ದೇವರಾಜು, ಲೀಲಾ ನಿರ್ವಾಣಿ, ಜಲಜಾ ಶೇಖರ್, ಸುಮಾ ಸುದೀಪ್, ಗಾಯತ್ರಿ ನಾಗರಾಜು ಹಾಗೂ ಸಂಘದ ವ್ಯವಸ್ಥಾಪಕ ಗುರುಸಿದ್ದಪ್ಪ ಅವರನ್ನು ಸನ್ಮಾನಿಸಲಾಯಿತು. ಸಂಘದ ಸದಸ್ಯರಿಗೆ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ವೇದಿಕೆಯಲ್ಲಿ ನಿರ್ದೇಶಕರಾದ ಶೋಭಾ ಯಶ್ವಂತ್, ಗೀತಾ ರಾಜು, ಜ್ಯೋತಿ ಶುಭಾಕರ್, ವರಲಕ್ಷ್ಮೀ ಸಿದ್ದೇಶ್ವರ್, ಚಂದ್ರಕಲಾ ಗಿರೀಶ್, ಅಮಿತ ಪ್ರದೀಪ್, ದಾಕ್ಷಾಯಣಿ ಶಿವಾನಂದ, ಶೈಲಾ ವಸಂತ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net