ಉತ್ತಮ ಸಾಧನೆಗೆ ಗೌರವ ಪ್ರೇರಣೆ

Narega Sanman
Published on

ಬೀದರ್: ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ 2019-20 ಹಾಗೂ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪ್ರಶಸ್ತಿ ನೀಡಿ ಗೌರವಿಸುವ ಸಮಾರಂಭ ಶನಿವಾರ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಜರುಗಿತು.
ಜಿಪಂ ಸಿಇಒ ಗ್ಯಾನೇಂದ್ರಕುಮಾರ ಗಂಗವಾರ ಮಾತನಾಡಿ, ಉದ್ಯೋಗ ಇಲ್ಲದವರಿಗೆ ಕೆಲಸ ನೀಡಲು ನರೇಗಾ ಯೋಜನೆ ಅನುಷ್ಠಾನವನ್ನು ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಅತ್ಯುತ್ತಮವಾಗಿ ಮಾಡಿದ ಅಧಿಕಾರಿ, ಸಿಬ್ಬಂದಿಯನ್ನು ಗುರುತಿಸಿ ಗೌರವಿಸುವ ಮೂಲಕ ಇನ್ನಷ್ಟು ಉತ್ತಮ ಸಾಧನೆ ಮಾಡುವಂತೆ ಪ್ರೇರಣೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಬಸವಕಲ್ಯಾಣ ತಾಪಂ ಕಾರ್ಯನಿರ್ವಹಣಾಧಿಕಾರಿ ಮಡೋಳಪ್ಪ ಹಾಗೂ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಶಿವಪುತ್ರ ಶಂಭು ಮಾತನಾಡಿ, ಜಿಪಂ ಸಿಇಒ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಉತ್ತಮ ಕಾರ್ಯಗಳಾಗುತ್ತಿವೆ. ಜಿಪಂನಲ್ಲಿ ಎಲ್ಲ ಇಲಾಖೆಗಳಿಂದ ಉತ್ತಮ ಸಮನ್ವಯದೊಂದಿಗೆ ಕಾರ್ಯನಿರ್ವಹಣೆ ಮಾಡಲಾಗುತ್ತಿವೆ ಎಂದರು.
ಬೀದರ್ ತಾಪಂ ಸಹಾಯಕ ನಿರ್ದೇಶಕ ಶರತಕುಮಾರ ಅಭಿಮಾನ ಮಾತನಾಡಿ, ದೊಡ್ಡ ದೊಡ್ಡ ಕಂಪನಿಗಳು ಬಾಗಿಲು ಮುಚ್ಚಿ ಜನರು ಕೆಲಸ ಕಳೆದುಕೊಳ್ಳುತ್ತಿರುವ ಈ ಹೊತ್ತಿನಲ್ಲಿ ನರೇಗಾ ಯೋಜನೆ ಕೆಲಸ ನೀಡುತ್ತ ಜೀವನಾಡಿಯಾಗಿದೆ. ಸಿಇಒ ನೇತೃತ್ವದಲ್ಲಿ ಉತ್ತಮ ಕೆಲಸಗಳಾಗಿ ನರೇಗಾದಡಿ ಜಿಲ್ಲೆಯಲ್ಲಿ ಹೊಸ ದಿನಗಳು ಆರಂಭವಾಗಿವೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net