ಉತ್ಪಾದನಾ ಘಟಕ ಸ್ಥಾಪನೆಗೆ ಸಹಾಯಧನ

Adarsha Shakshaka Prashasti Application
Published on

ಚಾಮರಾಜನಗರ: ಕೈಮಗ್ಗ ಮತ್ತು ಜವಳಿ ಇಲಾಖೆಯು 2024-25ನೇ ಸಾಲಿಗೆ ನೇಕಾರರ ಪ್ಯಾಕೇಜ್ ಯೋಜನೆಯಡಿ ಜವಳಿ ಉದ್ದಿಮೆಯಲ್ಲಿ ವೈಯಕ್ತಿಕ ಫಲಾನುಭವಿ, ಪಾಲುದಾರಿಕೆ ಸಂಸ್ಥೆ, ಕಂಪನಿ, ಜವಳಿ ಸಹಕಾರಿ ಸಂಘ, ಸಂಸ್ಥೆಯ ವತಿಯಿಂದ ಸಣ್ಣ ಮತ್ತು ಅತಿ ಸಣ್ಣ (ಎಸ್‌ಎಂಇ) ಜವಳಿ ಉತ್ಪಾದನೆ ಘಟಕಗಳನ್ನು ಸ್ಥಾಪಿಸಲು ಉತ್ತೇಜಿಸುವ ಸಲುವಾಗಿ ಉತ್ಪದನಾ ಘಟಕಗಳನ್ನು ಸ್ಥಾಪಿಸಲು ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜವಳಿ ಕ್ಷೇತ್ರದಲ್ಲಿ ಅನುಭವ ಪಡೆದಿರುವವರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳು ಸಣ್ಣ ಮತ್ತು ಅತಿ ಸಣ್ಣ ಘಟಕಗಳ ಸ್ಥಾಪನೆಯ ಯೋಜನಾ ಮೊತ್ತಕ್ಕೆ ಶೇ.75ರಷ್ಟು ಮತ್ತು ಗರಿಷ್ಠ 2 ಕೋಟಿ ರೂ. ಗಳ ಸಹಾಯಧನ ಪಡೆಯಲು ನವೆಂಬರ್ 30ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net