ಉತ್ಸವ ಮೂರ್ತಿಗಳ ಅಡ್ಡಪಲ್ಲಕ್ಕಿ ಉತ್ಸವ

19-pnp 2
Published on

ಪಾಂಡವಪುರ: ಕಾರ್ತಿಕ ಮಾಸದ ಮೂರನೇ ಸೋಮವಾರದ ಅಂಗವಾಗಿ ಪಟ್ಟಣದ ಚಂದ್ರಮೌಳೇಶ್ವರ ದೇವಸ್ಥಾನದ ಉತ್ಸವ ಮೂರ್ತಿಗಳ ಅಡ್ಡಪಲ್ಲಕ್ಕಿ ಉತ್ಸವ ಅದ್ದೂರಿಯಾಗಿ ಜರುಗಿತು.

ಸೋಮವಾರ ಬೆಳಗ್ಗಿನಿಂದ ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಬೆಳಗ್ಗಿನಿಂದಲೂ ಜನರು ಸರತಿ ಸಾಲಿನಲ್ಲಿ ನಿಂತು ದೇವರಿಗೆ ಪೂಜೆ ಸಲ್ಲಿಸಿದರು. ಕಾರ್ತಿಕ ಮಾಸ ಹಿನ್ನೆಲೆಯಲ್ಲಿ ದೇವಸ್ಥಾನವನ್ನು ತಳಿರು ತೋರಣ, ವಿವಿಧ ಬಗೆಯ ಹೂವು ಹಾಗೂ ವಿದ್ಯುತ್ ದೀಪಾಲಂಕಾರದಿಂದ ಸಿಂಗರಿಸಲಾಗಿತ್ತು. ರಾತ್ರಿ ದೇವಸ್ಥಾನದಿಂದ ಹೊರಟ ಉತ್ಸವ ಮೂರ್ತಿ ಪಟ್ಟಣದ ನಾಗಮಂಗಲ ರಸ್ತೆ, ಪೊಲೀಸ್ ಠಾಣೆ ರಸ್ತೆ, ಪೇಟೆ ಬೀದಿ, ಶಾಂತಿನಗರ, ಕೃಷ್ಣನಗರ, ಬೀರಶೆಟ್ಟಹಳ್ಳಿ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಈ ವೇಳೆ ಭಕ್ತರು ದೇವರಿಗೆ ಪೂಜೆ ಸಲ್ಲಿಸಿದರು. ಇಡೀ ರಾತ್ರಿ ಉತ್ಸವ ನಡೆದು ಮಂಗಳವಾರ ಮಧ್ಯಾಹ್ನದ ವೇಳೆಗೆ ದೇವಸ್ಥಾನ ಆವರಣ ತಲುಪಿತು. ಉತ್ಸವ ದೇವಸ್ಥಾನಕ್ಕೆ ತಲುಪುತ್ತಿದ್ದಂತೆ ದೇವರಿಗೆ ಮಂಗಳಾರತಿ ನೆರವೇರಿಸಲಾಯಿತು. ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net