ಉತ್ಸವಾಂಬ ಕಾರ್ತಿಕ ಮಹೋತ್ಸವ ಇಂದು

Ucchhangi Yallamma Devi
Published on

ಚಿತ್ರದುರ್ಗ: ಪಾಳೆಗಾರರ ಕುಲದೇವತೆ ಕೋಟೆ ರಸ್ತೆಯ ಉಚ್ಚಂಗಿ ಯಲ್ಲಮ್ಮ ದೇಗುಲದಲ್ಲಿ ಡಿ. 8ರಂದು ಕಾರ್ತಿಕ ಮಹೋತ್ಸವ, ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಆವರಣದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 3ರವರೆಗೆ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿದೆ. ಸಂಜೆ 6.30ಕ್ಕೆ ದೀಪೋತ್ಸವ ಜರುಗಲಿದೆ ಎಂದು ದೇಗುಲದ ಅರ್ಚಕ ಅಭಿಷೇಕ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net