ಉದ್ದ ಜಿಗಿತ ಶುಭಾ ಪ್ರಥಮ

SRS
Published on

ಚಿತ್ರದುರ್ಗ: ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ನಗರದ ಎಸ್‌ಆರ್‌ಎಸ್ ಆಸ್ಕರ್ ಫೆರ್ನಾಂಡಿಸ್ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಶುಭಾ ಉದ್ದ ಜಿಗಿತ ಮತ್ತು 100 ಮೀಟರ್ ರಿಲೇಯಲ್ಲಿ ಪ್ರಥಮ ಹಾಗೂ 200 ಮೀಟರ್ ರಿಲೇಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾಳೆ.

7ನೇ ತರಗತಿ ವಿದ್ಯಾರ್ಥಿ ನೂತನ್ ಉದ್ದ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ, ತಬರೇಜ್ ಆಫೀಫಾಗೆ ತೃತೀಯ ಸ್ಥಾನ ಪಡೆದಿದ್ದಾನೆ. ವಿದ್ಯಾರ್ಥಿಗಳ ಸಾಧನೆಗೆ ಎಸ್‌ಆರ್‌ಎಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ಕಾರ್ಯದರ್ಶಿ ಸುಜಾತಾ ಲಿಂಗಾರೆಡ್ಡಿ, ಉಪಾಧ್ಯಕ್ಷ ಬಿ.ಎಲ್.ಅಮೋಘ, ದೈಹಿಕ ಶಿಕ್ಷಣ ಶಿಕ್ಷಕರಾದ ಮಧು, ಸತೀಶ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net