ಉದ್ದೂರು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಮಹೇಶ್ ಅಧ್ಯಕ್ಷ

ಉದ್ದೂರು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಮಹೇಶ್ ಅಧ್ಯಕ್ಷ
Published on

ಬನ್ನಿಕುಪ್ಪೆ: ತಾಲೂಕಿನ ಉದ್ದೂರು ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ ಐದು ವರ್ಷದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಟಿಂಬರ್ ಮಹೇಶ್ ಹಾಗೂ ಉಪಾಧ್ಯಕ್ಷರಾಗಿ ಪದ್ಮಾ ಜನಾದರ್ನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಆಡಳಿತ ಮಂಡಳಿಗೆ 12 ಜನ ನಿರ್ದೇಶಕರ ಆಯ್ಕೆಯಾಗಿದ್ದರು. ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಟಿಂಬರ್ ಮಹೇಶ್ ಅಧ್ಯಕ್ಷ ಮತ್ತು ಪದ್ಮಾ ಜನಾದರ್ನ್‌ರವರು ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದೊಂದೇ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅಧ್ಯಕ್ಷರಾಗಿ ಟಿಂಬರ್ ಮಹೇಶ್ ಹಾಗೂ ಉಪಾಧ್ಯಕ್ಷರಾಗಿ ಪದ್ಮಾ ಜನಾದರ್ನ್ ಅವಿರೋಧವಾಗಿ ಆಯ್ಕೆಗೊಂಡರು. ಹುಣಸೂರು ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ರಾಜಣ್ಣ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಕಾರ್ಯದರ್ಶಿ ಪ್ರಸನ್ನ ಹಾಜರಿದ್ದರು.

ಸಂಘದಿಂದ ಅಕ್ರಮ ತಡೆಯಲು ದೂರು ಪೆಟ್ಟಿಗೆ: ಅಭಿನಂದನೆ ಸ್ವೀಕರಿಸಿ ಟಿಂಬರ್ ಮಹೇಶ್ ಮಾತನಾಡಿ, ರೈತರ ಅನುಕೂಲಕ್ಕಾಗಿ ದೂರು ಪೆಟ್ಟಿಗೆ ಅಳವಡಿಸುತ್ತೇವೆ. ರೈತರಿಗೆ ಸಿಗುವ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ತಲುಪಿಸುತ್ತೇವೆ. ಸಂಸ್ಥೆ ಬೆಳಗಬೇಕು ಎನ್ನುವ ದೃಷ್ಟಿಕೋನದಿಂದ ನಾವೆಲ್ಲರೂ ಒಂದೇ ಮನಸ್ಸಿನಿಂದ ಕೆಲಸ ಮಾಡುತ್ತೇವೆ. ಸಂಘದ ಬೆಳವಣಿಗೆಗೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು. ಆಯ್ಕೆಯಾಗಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ ಅವರು ಸರ್ವರ ಸಹಕಾರ ಕೋರಿದರು.

ಅಧ್ಯಕ್ಷ ಸ್ಥಾನಕ್ಕೆ ಮಹೇಶ್ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾದ ಪದ್ಮಾ ಜನಾರ್ದನ್ ಮುಖಂಡರು ಹಾಗೂ ಗ್ರಾಮಸ್ಥರಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು. ನಿರ್ದೇಶಕರಾದ ಮಹದೇವ್, ಬೀರೇಗೌಡ, ಸಣ್ಣಸ್ವಾಮಿಗೌಡ, ತಿಮ್ಮೇಗೌಡ, ಕರಿಗೌಡ, ತಿಮ್ಮನಾಯಕ, ಎಲ್.ಮಾದೇವ್, ರಾಜೇಶ್ವರಿ, ಕೃಷ್ಣಶೆಟ್ಟಿ, ಶಿವನ್‌ಶೆಟ್ಟಿ ಸೇರಿದಂತೆ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net