

ಬೆಳಗಾವಿ: ರಾಜ್ಯ ಸರ್ಕಾರದ ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ವತಿಯಿಂದ ‘ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಛಿಸುವವರಿಗಾಗಿ ಒಂದು ದಿನದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಜುಲೈ ಕೊನೆಯ ವಾರದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.
ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕ್ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ, ಇತ್ಯಾದಿ ವಿಷಯಗಳ ಕುರಿತು ತರಬೇತಿ ನೀಡಲಾಗುವುದು.
ಬೆಳಗಾವಿ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜು.15 ಕೊನೆಯ ದಿನವಾಗಿದ್ದು, ಮಾಹಿತಿಗಾಗಿ ಮೊ.ಸಂ.: 9916798073, 8867417425 ಸಂಪರ್ಕಿಸಬಹುದು.