ಉದ್ಯೋಗ ಖಾತ್ರಿ ದಿನಗೂಲಿ ದರ 370 ರೂ.ಗಳಿಗೆ ಏರಿಕೆ

ef29167e-2b7e-4ec2-ade7-29782a819d3d
Published on

ಬಾಗಲಕೋಟೆ:  ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅಕುಶಲ ಕೂಲಿಕೆಲಸ ಮಾಡುವ ಗ್ರಾಮೀಣ ಕೂಲಿಕಾರರ ದಿನಗೂಲಿ ದರವನ್ನು 370 ರೂ ಗಳಿಗೆ ಹೆಚ್ಚಳ ಮಾಡಿ ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಮಂತ್ರಾಲಯವು ಆದೇಶ ಹೊರಡಿಸಿದೆ ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಧರ ಕುರೇರ್ ತಿಳಿಸಿದ್ದಾರೆ.

2024-25 ನೇ ಸಾಲಿನಲ್ಲಿ ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಕೂಲಿ ಕಾರ್ಮಿಕರ ದಿನಗೂಲಿ ದರ 349 ರೂ.ಗಳಿದ್ದು, 2025-26 ನೇ ಸಾಲಿನಲ್ಲಿ ಏಪ್ರಿಲ್ 1 ರಿಂದ 370 ರೂ. ಗಳ ದಿನಗೂಲಿ ದರವನ್ನು ನಿಗದಿಪಡಿಸಿದೆ.

ನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶದ ಪ್ರತಿ ಅರ್ಹ ಕುಟುಂಬಕ್ಕೂ ಒಂದು ಆರ್ಥಿಕ ವರ್ಷದಲ್ಲಿ 100 ದಿನಗಳ ಅಕುಶಲ ಕೂಲಿ ಕೆಲಸ ಕೊಡಲಾಗುತ್ತದೆ. ಒಂದು ಕುಟುಂಬ ವರ್ಷದಲ್ಲಿ ನೂರು ದಿನ ಕೆಲಸ ಮಾಡಿದರೆ 37 ಸಾವಿರ ರೂ. ಗಳ ಕೂಲಿ ಹಣ ಪಡೆದುಕೊಳ್ಳಬಹುದು. ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡುವ ಗಂಡು-ಹೆಣ್ಣಿಗೂ 370 ರೂ ಸಮಾನ ಕೂಲಿ ವೇತನ ಪಡೆಯಬಹುದು ಎಂದು ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net