

ಕೊಳ್ಳೇಗಾಲ: ಪಟ್ಟಣದ ಶ್ರೀ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏ.29ರಂದು ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಪ್ರಾಂಶುಪಾಲೆ ಪ್ರೊ.ಬಿ.ಜಯಲಕ್ಷ್ಮೀ ತಿಳಿಸಿದ್ದಾರೆ.
ಕಾಲೇಜು ಆವರಣದಲ್ಲಿ ಉದ್ಯೋಗ ಮಾರ್ಗದರ್ಶಿ ಸಂದರ್ಶನ ಕಾರ್ಯಕ್ರಮ ಆಯೋಜಿಸಲಾಗಿದ್ದು, ಪದವಿ ಪೂರ್ವ, ಸ್ನಾತಕ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಮೇಳದಲ್ಲಿ ಆಕ್ಸಿಸ್ ಬ್ಯಾಂಕ್, ಎಸ್‌ಬಿಐ, ಮುತ್ತೂಟ್ ಫೈನಾನ್ಸ್, ಕ್ಯಾಡ್ಮಾಕ್ಸ್, ಎಲೆಕ್ಟ್ರಾನಿಕ್ ಸೇರಿದಂತೆ ವಿವಿಧ ಕಂಪೆನಿಗಳು ಭಾಗವಹಿಸಲಿದ್ದು, ವಿದ್ಯಾರ್ಥಿಗಳು ಅಂಕಪಟ್ಟಿ ಸೇರಿದಂತೆ ಮೂಲ ದಾಖಲಾತಿಗಳೊಂದಿಗೆ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಫ್ಲೇಸ್ಮೆಂಟ್ ಸೆಲ್ ಅಧಿಕಾರಿ ಡಾ.ಆನಂದ 9113579139 ಸಂಪರ್ಕಿಸಬಹುದು.