ಉದ್ಯೋಗ ಮೇಳ ನಿರ್ಲಕ್ಷಿಸುವವರ ವಿರುದ್ಧ ಕ್ರಮ

7 Dwd 9
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಉದ್ಯೋಗ ಮೇಳದ ವಿವಿಧ ಕಾರ್ಯಗಳಿಗೆ ನಿಯೋಜಿತರಾಗಿರುವ ಅಧಿಕಾರಿ, ಸಿಬ್ಬಂದಿ ವಹಿಸಿದ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ನಿರ್ಲಕ್ಷ÷್ಯ, ಉದಾಸೀನತೆ ತೋರುವವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಕೌಶಲ್ಯ ಮಿಷನ್ ಅಧ್ಯಕ್ಷೆ ಹಾಗೂ ಜಿಲ್ಲಾಧಿಕಾರಿ ದಿವ್ಯ ಪ್ರಭು ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಕೆಸಿಡಿ ಆವರಣದಲ್ಲಿನ ವಿ.ಕೃ. ಗೋಕಾಕ ಗ್ರಂಥಾಲಯ, ಪಿ.ಜಿ. ಕಾಲೇಜು, ಟೂರಿಸಂ ವಿಭಾಗ, ಬಿಬಿಎ, ಬಿಸಿಎ ಕಾಲೇಜು, ವಾಚನಾಲಯ ಆವರಣದಲ್ಲಿ ಮಾ. 9ರಂದು ಉದ್ಯೋಗ ಮೇಳ ನಡೆಯಲಿದೆ. ವಿವಿಧ ಜವಾಬ್ದಾರಿಗಳ ನಿರ್ವಹಣೆಗೆ ನೇಮಕಗೊಂಡಿರುವ ಅಧಿಕಾರಿಗಳು ಕರ್ತವ್ಯಗಳನ್ನು ಶಿಸ್ತುಬದ್ಧವಾಗಿ ನಿರ್ವಹಿಸಬೇಕು. ವಿವಿಧ ಕಂಪನಿ, ಕೈಗಾರಿಕೆಗಳು 12,145 ಜನರ ಮಾನವ ಸಂಪನ್ಮೂಲ ಪೂರೈಕೆಗೆ ಬೇಡಿಕೆ ಸಲ್ಲಿಸಿದ್ದಾರೆ. ಈಗಾಗಲೇ 6,262 ಉದ್ಯೋಗಾಕಾಂಕ್ಷಿಗಳು ನೋಂದಾ¬ಸಿಕೊ0ಡಿದ್ದಾರೆ. ಅವರಿಗೆ ಅಗತ್ಯ ಮಾಹಿತಿ ನೀಡಬೇಕು. ಉದ್ಯೋಗದಾತರೊಂದಿಗೆ ಸಂಯೋಜನೆ ಮಾಡಬೇಕು ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ, ಉಪ ಪೊಲೀಸ್ ಆಯುಕ್ತ ಮಾನಿಂಗ ನಂದಗಾವಿ ವೇದಿಕೆಯಲ್ಲಿದ್ದರು. ವಿವಿಧ ಇಲಾಖೆ ಜಿಲ್ಲಾ, ತಾಲೂಕು ಮಟ್ಟದ ಅಽಕಾರಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net