ಉದ್ಯೋಗ ಮೇಳಕ್ಕೆ ಸಿದ್ಧತೆ ಕೈಗೊಳ್ಳಿ

CTD JOB MELA----
format: filter: 0; fileterIntensity: 0.0; filterMask: 0; captureOrientation: 0; runfunc: 0; algolist: 0; multi-frame: 1; brp_mask:0; brp_del_th:0.0000,0.0000; brp_del_sen:0.0000,0.0000; motionR: 0; delta:1; bokeh:1; module: photo;hw-remosaic: false;touch: (0.5304765, 0.5014881);sceneMode: 13107200;cct_value: 0;AI_Scene: (-1, -1);aec_lux: 280.0;aec_lux_index: 0;albedo: ;confidence: ;motionLevel: 0;weatherinfo: weather?null, icon:null, weatherInfo:100;temperature: 33;
Published on

ಚಿತ್ರದುರ್ಗ: ನಗರದ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಮಾ. 1ರಂದು ಹಮ್ಮಿಕೊಂಡಿರುವ ಬೃಹತ್ ಉದ್ಯೋಗ ಮೇಳಕ್ಕೆ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಪಂ ಸಿಇಒ ಎಸ್.ಜೆ. ಸೋಮಶೇಖರ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿಯಲ್ಲಿ ಇತ್ತೀಚೆಗೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದ ಮೊದಲ ಸಭೆಯಲ್ಲಿ ಸೂಕ್ತ ಸಲಹೆ, ಸೂಚನೆಗಳನ್ನು ಕೊಡಲಾಗಿದೆ. ಮೇಳದ ಯಶಸ್ಸಿಗೆ 7 ಉಪ ಸಮಿತಿಗಳನ್ನು ಜಿಲ್ಲಾಧಿಕಾರಿ ರಚಿಸಿದ್ದಾರೆ. ಜಿಲ್ಲೆಯಲ್ಲಿ ಉನ್ನತ ವ್ಯಾಸಂಗ ಮಾಡಿರುವ ಅಧಿಕ ಸಂಖ್ಯೆಯ ಅಭ್ಯರ್ಥಿಗಳಿಗೆ ಉದ್ಯೋಗ ಒದಗಿಸಬೇಕಿದೆ. ಆದ್ದರಿಂದ ಅಧಿಕಾರಿಗಳು ಮೇಳವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ತಿಳಸಿದರು.

ಪ್ರತಿ ಗ್ರಾಪಂ, ತಾಲೂಕು ಕೇಂದ್ರಗಳು, ನಗರ, ಸ್ಥಳೀಯ ಸಂಸ್ಥೆಗಳ ಕಚೇರಿಗಳಲ್ಲಿ ಉದ್ಯೋಗ ಮೇಳ ಕುರಿತಂತೆ ಫ್ಲೆಕ್ಸ್ ಅಳವಡಿಸಬೇಕು. ಕಸ ವಿಲೇವಾರಿ ವಾಹನಗಳ ಮೂಲಕ ಪ್ರಚಾರ ನಡೆಸಬೇಕು. ಕಾಲೇಜುಗಳ ಮುಖ್ಯಸ್ಥರು, ಸಾಮಾಜಿಕ ಮಾಧ್ಯಮಗಳ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಬೇಕು. ಈಗಾಗಲೇ ಉತ್ತಮ ಕಂಪನಿಗಳು ಮೇಳದಲ್ಲಿ ಭಾಗವಹಿಸಲು ಸಮ್ಮತಿಸಿವೆ. ಇನ್ನೂ ಅಧಿಕ ಸಂಖ್ಯೆ ಯಲ್ಲಿ ಕಂಪನಿಗಳು ಭಾಗವಹಿಸಬೇಕು ಎಂದರು.

ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಪದವೀಧರರು, ಡಿಪ್ಲೊಮಾ ಪದವಿ ಪಡೆದ 4300 ಅಭ್ಯರ್ಥಿಗ ಳು ಮೇಳದಲ್ಲಿ ಪಾಲ್ಗೊಳ್ಳಬೇಕು. ಅಧಿಕೃತ ವೈಬ್‌ಸೈಟ್ ಮೂಲಕ ಅಭ್ಯರ್ಥಿಗಳ ನೋಂದಣಿಗೆ ಕ್ರಮ ವಹಿಸಬೇಕು. ಅಗತ್ಯ ಮೂಲ ಸೌಕರ್ಯ, ನೋಂದಣಿ ಕೌಂಟರ್‌ಗಳನ್ನು ಸ್ಥಾಪಿಸಬೇಕು. ಸಹಾಯ ಕೇಂದ್ರವನ್ನೂ ಸ್ಥಾಪಿಸಬೇಕು. ವೈದ್ಯಕೀಯ ಚಿಕಿತ್ಸೆಗೆ ವ್ಯವಸ್ಥೆ ಹಾಗೂ ಬಂದೋ ಬಸ್ತ್ ಇರಬೇಕೆಂದು ಸಿಇಒ ಸೂಚಿಸಿದರು.

ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ಜಿಪಂ ಸಿಪಿಒ ಗಾಯತ್ರಿ, ಡಿವೈಎಸ್‌ಪಿ ಪಿ.ಕೆ. ದಿನಕರ್, ಕೌಶಲಾಭಿವೃದ್ಧಿ ಇಲಾಖೆ ಅಧಿಕಾರಿ ವೇಮಣ್ಣ, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂದನ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net