ಉದ್ಯೋಗತ್ತ ವಿದ್ಯಾರ್ಥಿಗಳು ಹೆಚ್ಚಿನ ಗಮನ ನೀಡಬೇಕು: ಡಾ. ಎಸ್. ಪ್ರದೀಪ್

ಉದ್ಯೋಗತ್ತ ವಿದ್ಯಾರ್ಥಿಗಳು ಹೆಚ್ಚಿನ ಗಮನ ನೀಡಬೇಕು: ಡಾ. ಎಸ್. ಪ್ರದೀಪ್
Published on

 ಹಾಸನ: ಹಾಸನದ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ವಿಭಾಗದ ಹಾಗೂ ಬೆಂಗಳೂರಿನ ಬೀಟಾ ಸಿಎಇ ಸಿಸ್ಟಮ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಹಯೋಗ ಒಪ್ಪಂದದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಪ್ರಾಧ್ಯಾಪಕರಿಗೆ ತರಬೇತಿ ಕಾರ್ಯಾಗಾರ ಆಯೋಜನೆ ಮಾಡಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಎಸ್. ಪ್ರದೀಪ್ ಹೇಳಿದರು.

ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಸೆಮಿನಾರ್ ಹಾಲ್‌ನಲ್ಲಿ ಬುಧವಾರ ನಡೆದ ಬೀಟಾ ಕಂಪನಿ ಹಾಗೂ ಕಾಲೇಜಿನ ಒಪ್ಪಂದದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ ಅವರು, ತರಬೇತಿಯನ್ನು ಹೊಂದಿದ ಅರ್ಹ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಈ ಕಾರ್ಯಕ್ರಮದ ಸದುಪಯೋಗದಿಂದ ವಿದ್ಯಾರ್ಥಿಗಳಿಗೆ ಐಟಿ ಕಂಪನಿಗಳಲ್ಲಿ ಹೆಚ್ಚಿನ ಉದ್ಯೋಗ ಪಡೆಯಲು ಅವಕಾಶವಿದೆ. ಇಂತಹ ಹಲವಾರು ಕಂಪನಿಗಳಿಂದ ಸಹಯೋಗದ ಒಪ್ಪಂದ ಮಾಡಿಕೊಂಡು ಹೆಚ್ಚಿನ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲು ಚಿಂತಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥರಾದ ಡಾ. ಎಜಿಲ್ ವಣ್ಣನ್, ಬೆಂಗಳೂರಿನ ಬೀಟಾ ಸಿಎಇ ಸಿಸ್ಟಮ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ಟಾವ್ ರೋಸ್ ಕ್ಲೀವರಿಯಸ್, ಕಂಪನಿ ಸಿಎಇ ಲೋಕೇಶ್ ಬೋಮನಿ, ಕಂಪನಿಯ ಪರವಾಗಿ ಅರುಣ್, ಪಿ. ಗೋಪಿಕಾ, ಕಾಲೇಜಿನ ಉದ್ಯೋಗ ಮಾಹಿತಿ ಅಧಿಕಾರಿ ಬಿ.ಬಿ.ನೀಲಕಂಠಪ್ಪ, ಡಾ. ರಾಘವೇಂದ್ರ ರಾವ್, ಡಾ. ಟಿ.ಎಸ್. ಹೇಮಂತ ಹಾಗೂ ಮೆಕಾನಿಕಲ್ ವಿಭಾಗದ ಪ್ರಾಧ್ಯಾಪಕರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net